ದೇಶ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ, ಕಲ್ಲು ತೂರಾಟ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಭಾನುವಾರ ಕಲ್ಲು ತೂರಾಟ ನಡೆದಿದೆ. ಪಾಟ್ನಾದಲ್ಲಿ ನಡೆದ ಈ ಘಟನೆ ವೇಳೆ ಬೆಂಗಾವಲು ವಾಹನ ಪಡೆಯಲ್ಲಿ ನಿತೀಶ್ ಕುಮಾರ್ ಇರಲಿಲ್ಲ ಎಂದು ತಿಳಿದುಬಂದಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ, ಕಲ್ಲು ತೂರಾಟ
ಬೆಂಗಾವಲು ವಾಹನದ ಗಾಜುಗಳಿಗೆ ಹಾನಿ
Published On :

ಪಾಟ್ನಾ:  ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ  ಭಾನುವಾರ ಕಲ್ಲು ತೂರಾಟ ನಡೆದಿದೆ. ಪಾಟ್ನಾದಲ್ಲಿ ನಡೆದ ಈ  ಘಟನೆ ವೇಳೆ ಬೆಂಗಾವಲು ವಾಹನ ಪಡೆಯಲ್ಲಿ ನಿತೀಶ್ ಕುಮಾರ್ ಇರಲಿಲ್ಲ ಎಂದು ತಿಳಿದುಬಂದಿದೆ.

ದಾಳಿಯಲ್ಲಿ ಬೆಂಗಾವಲು ವಾಹನದ ಕಾರಿನ  ಗಾಜುಗಳಿಗೆ ಹಾನಿಯಾಗಿದೆ. ಇತ್ತೀಚಿಗೆ ನಡೆದ ರಾಜಕೀಯ ಬೆಳವಣಿಗೆಯಲ್ಲಿ
ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರ ಪತನವಾಗಿ  'ಮಹಾಘಟಬಂಧನ್' -02  ಸರ್ಕಾರ ರಚನೆಯಾಗಿತ್ತು. 

ಬಿಜೆಪಿ ಜೊತೆಗಿನ ಧೀರ್ಘ ಸಂಬಂಧವನ್ನು ಕಡಿದುಕೊಂಡು ಆರ್ ಜೆಡಿ ನೇತೃತ್ವದ ವಿಪಕ್ಷಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಎಂಟನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ, ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.