ಬೆತ್ತಲೆ ಫೋಟೋ ಶೂಟ್ ವಿವಾದ: ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯಾವಕಾಶ ಕೇಳಿದ ನಟ ರಣವೀರ್ ಸಿಂಗ್
ಬಾಲಿವುಡ್ ನಟ ರಣವೀರ್ ಸಿಂಗ್ ತಮ್ಮ ವಿರುದ್ಧ ದಾಖಲಾಗಿರುವ ಬೆತ್ತಲೆ ಫೋಟೋ ಶೂಟ್ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯಾವಕಾಶವನ್ನು ಕೇಳಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮುಂಬೈ: ಬಾಲಿವುಡ್ ನಟ ರಣವೀರ್ ಸಿಂಗ್ ತಮ್ಮ ವಿರುದ್ಧ ದಾಖಲಾಗಿರುವ ಬೆತ್ತಲೆ ಫೋಟೋ ಶೂಟ್ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯಾವಕಾಶವನ್ನು ಕೇಳಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ರಣವೀರ್ ಸಿಂಗ್ ವಿರುದ್ಧ ಚೆಂಬೂರು ಠಾಣೆಯಲ್ಲಿ ದಾಖಲಾಗಿರುವ ಎಫ್ ಐಆರ್ ಗೆ ಸಂಬಂಧಿಸಿದಂತೆ ನಾಳೆ ವಿಚಾರಣೆಗಾಗಿ ಹಾಜರಾಗುವಂತೆ ಸಮನ್ಸ್ ನೀಡಲಾಗಿದ್ದು, ತನಿಖೆಗೆ ಹಾಜರಾಗಲು ಹೆಚ್ಚಿನ ಸಮಾಯವಕಾಶವನ್ನು ನಟ ಕೇಳಿರುವುದಾಗಿ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಆಗಸ್ಟ್ 12 ರಂದು ಚೆಂಬೂರ್ ಪೊಲೀಸ್ ಠಾಣೆಯ ಸಿಬ್ಬಂದಿ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ತನಿಖೆಗೆ ಹಾಜರಾಗಲು ನೋಟಿಸ್ ನೀಡಿದ್ದರು, ಆದರೆ ಅವರು ಮುಂಬೈನಲ್ಲಿಲ್ಲ, ಆಗಸ್ಟ್ 16 ರಂದು ಅವರು ನಗರಕ್ಕೆ ಹಿಂತಿರುಗಲಿದ್ದಾರೆ ಎಂದು ಅವರಿಗೆ ತಿಳಿಸಲಾಗಿತ್ತು.
ಲಾಭೋದ್ದೇಶವಿಲ್ಲದ ಸಂಸ್ಥೆಯ ಪದಾಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಕಳೆದ ತಿಂಗಳು ಚೆಂಬೂರ್ ಪೊಲೀಸ್ ಠಾಣೆಯಲ್ಲಿ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಣವೀರ್ ಸಿಂಗ್ ತನ್ನ ಬೆತ್ತಲೆ ಫೋಟೋ ಶೂಟ್ ಮೂಲಕ ಮಹಿಳೆಯರ ಭಾವನೆಗಳನ್ನು ನೋಯಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


