ರಜೌರಿ ಸೇನಾ ಶಿಬಿರದ ಮೇಲೆ ಆತ್ಮಾಹುತಿ ದಾಳಿ: ಹುತಾತ್ಮ ಯೋಧರ ಸಂಖ್ಯೆ ಐದಕ್ಕೆ ಏರಿಕೆ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಆಗಸ್ಟ್ 11 ರಂದು ಉಗ್ರರು ಸೇನಾ ಶಿಬಿರದ ಮೇಲೆ ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು...

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಆಗಸ್ಟ್ 11 ರಂದು ಉಗ್ರರು ಸೇನಾ ಶಿಬಿರದ ಮೇಲೆ ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಉಧಮ್‌ಪುರದ ಉತ್ತರ ಕಮಾಂಡ್‌ನಲ್ಲಿರುವ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಹವಾಲ್ದಾರ್ ಸತ್ಪಾಲ್ ಸಿಂಗ್ ಭಾನುವಾರ ತಡರಾತ್ರಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದರೊಂದಿಗೆ ರಜೌರಿ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಇಂದು ಉಧಂಪುರದ ಕಮಾಂಡ್ ಆಸ್ಪತ್ರೆಯಲ್ಲಿ ಯೋಧನಿಗೆ ಪುಷ್ಪಾರ್ಚನೆ ಕಾರ್ಯಕ್ರಮ ನಡೆಸಿದ ನಂತರ ಅವರ ಪಾರ್ಥಿವ ಶರೀರವನ್ನು ರಾಜಸ್ಥಾನದ ಅವರ ಸ್ವಗ್ರಾಮಕ್ಕೆ ಕೊಂಡೊಯ್ಯಲಾಯಿತು ಎಂದು ಅವರು ಹೇಳಿದ್ದಾರೆ.
ಸೇನಾ ಶಿಬಿರದೊಳಗೆ ನುಗ್ಗಲು ಪ್ರಯತ್ನಿಸಿದ ನಿಷೇಧಿತ ಜೈಷ್ ಇ ಮೊಹಮ್ಮದ್ ಸಂಘಟನೆ ಇಬ್ಬರು ಆತ್ಮಾಹತ್ಯಾ ದಾಳಿಕೋರರನ್ನು ಹತ್ಯೆ ಮಾಡಲಾಗಿದೆ. ಈ ಗುಂಡಿನ ಕಾಳಗದಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


