ಡಿಸಿಎಂ ಮನೀಶ್ ಸಿಸೋಡಿಯಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ ಇಡಿ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.
ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳ ಕುರಿತು ಡಿಸಿಎಂ ಮತ್ತು ಅಬಕಾರಿ ಸಚಿವ ಮನೀಶ್ ಸಿಸೋಡಿಯಾ ಸೇರಿದಂತೆ 15 ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿತ್ತು. ಈ ಎಫ್‌ಐಆರ್‌ನ ಅರಿವನ್ನು ಪಡೆದುಕೊಂಡ ನಂತರ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
ಕಳೆದ ಆಗಸ್ಟ್ 19ರಂದು ಈ ಸಂಬಂಧ ಸಿಬಿಐ ದಾಳಿ ನಡೆಸಿತ್ತು. ಸಿಸೋಡಿಯಾ, ಐಎಎಸ್ ಅಧಿಕಾರಿ ಮತ್ತು ದೆಹಲಿಯ ಮಾಜಿ ಅಬಕಾರಿ ಆಯುಕ್ತ ಅರವ ಗೋಪಿ ಕೃಷ್ಣ ಅವರ ದೆಹಲಿ ನಿವಾಸ ಮತ್ತು ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 19 ಸ್ಥಳಗಳಲ್ಲಿ ದಾಳಿ ನಡೆಸಿತ್ತು.
ಸಿಸೋಡಿಯಾ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಅಬಕಾರಿ ಮತ್ತು ಶಿಕ್ಷಣ ಸೇರಿದಂತೆ ಅನೇಕ ಖಾತೆಗಳನ್ನು ಹೊಂದಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಹೊರತಂದ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮಗಳು ನಡೆದಿದ್ದರೆ ಇಡಿ ತನಿಖೆ ನಡೆಸಲಿದೆ.
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಕಳೆದ ತಿಂಗಳು ದೆಹಲಿಯ ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿನ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ ಈ ಯೋಜನೆಯು ಸ್ಕ್ಯಾನರ್ ಅಡಿಯಲ್ಲಿ ಬಂದಿತು. ಈ ಪ್ರಕರಣದಲ್ಲಿ 11 ಅಬಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.
Related Article
ಸಿಬಿಐ 2-3 ದಿನಗಳಲ್ಲಿ ಮನೀಶ್ ಸಿಸೋಡಿಯಾ ಬಂಧಿಸಲಿದೆ: ದೆಹಲಿ ಸಿಎಂ ಕೇಜ್ರಿವಾಲ್
ಸಿಸೋಡಿಯಾಗೆ ಬಿಜೆಪಿ ನೀಡಿದ ಆಫರ್ ಆಡಿಯೋ ನಮ್ಮ ಬಳಿ ಇದೆ; ಸಮಯ ಬಂದಾಗ ಹೊರಬಿಡುತ್ತೇವೆ: ಎಎಪಿ ಮೂಲಗಳು
ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಭಾರತ ರತ್ನ ನೀಡಬೇಕಿತ್ತು: ಕೇಜ್ರಿವಾಲ್
ಅವರು ಗಾಂಜಾ ಸೇವಿಸಿದ್ದಾರೆಯೇ?: ಪಕ್ಷಕ್ಕೆ ಆಹ್ವಾನ ನೀಡಿದೆ ಎಂದ ಮನೀಶ್ ಸಿಸೋಡಿಯಾ ವಿರುದ್ಧ ಬಿಜೆಪಿ
'ಎಎಪಿ ಬಿಟ್ಟು ಬಿಜೆಪಿ ಪಕ್ಷ ಸೇರಿದರೆ ಎಲ್ಲಾ ಕೇಸ್ ಕ್ಲೋಸ್': ಸಂದೇಶ ಬಂದಿದ್ದಾಗಿ ಮನೀಶ್ ಸಿಸೋಡಿಯಾ ಆರೋಪ
2024ರ ಚುನಾವಣೆ ನಂತರ ಜನರೇ ಬಿಜೆಪಿಗೆ ಲುಕ್ ಔಟ್ ನೋಟಿಸ್ ನೀಡುತ್ತಾರೆ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ
ದೆಹಲಿ ಅಬಕಾರಿ ನೀತಿ ವಿವಾದ: ಸಿಸೋಡಿಯಾ ಆಪ್ತ ವಿಜಯ್ ನಾಯರ್ ವಿರುದ್ಧ ಕೇಂದ್ರದಿಂದ ಪರ್ಯಾಯ ತನಿಖೆ!
ದೆಹಲಿ ಅಬಕಾರಿ ಹಗರಣ: ಸಿಸೋಡಿಯಾ ನಿವಾಸದ ಮೇಲೆ ದಾಳಿ ಬೆನ್ನಲ್ಲೇ ಆರೋಪಿಗಳಿಗೆ ಸಿಬಿಐ ಸಮನ್ಸ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


