ರಾಜಸ್ಥಾನದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್, ಸಿಬ್ಬಂದಿ ಸುರಕ್ಷಿತ
ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್ ಮಂಗಳವಾರ ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ಜಮೀನೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಪುರ: ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್ ಮಂಗಳವಾರ ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ಜಮೀನೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಲಿಕಾಪ್ಟರ್‌ನಲ್ಲಿದ್ದ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದರು.
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಮಂಗಳವಾರ ಬೆಳಗ್ಗೆ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಸಂಗಾರಿಯಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಹನುಮಾನ್‌ರಾಮ್ ವಿಷ್ಣೋಯ್ ಮಾಹಿತಿ ನೀಡಿದ್ದಾರೆ.
'ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಅದರಲ್ಲಿನ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ" ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


