ಪಕ್ಷ ಬದಲಾಯಿಸಲು ನಾಲ್ವರು ಶಾಸಕರಿಗೆ ಬಿಜೆಪಿ ತಲಾ 20 ಕೋಟಿ ರೂ. ಆಫರ್ ನೀಡಿದೆ: ಎಎಪಿ
ಬಿಜೆಪಿಯು ದೆಹಲಿಯ ತನ್ನ ನಾಲ್ವರು ಶಾಸಕರನ್ನು ಸಂಪರ್ಕಿಸಿದ್ದು, ಪಕ್ಷ ಬದಲಿಸಿ ಕೇಸರಿ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದೆ ಎಂದು ಆಮ್ ಆದ್ಮಿ ಪಕ್ಷ(ಎಎಪಿ) ಬುಧವಾರ ಆರೋಪಿಸಿದೆ.

ನವದೆಹಲಿ: ಬಿಜೆಪಿಯು ದೆಹಲಿಯ ತನ್ನ ನಾಲ್ವರು ಶಾಸಕರನ್ನು ಸಂಪರ್ಕಿಸಿದ್ದು, ಪಕ್ಷ ಬದಲಿಸಿ ಕೇಸರಿ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದೆ ಎಂದು ಆಮ್ ಆದ್ಮಿ ಪಕ್ಷ(ಎಎಪಿ) ಬುಧವಾರ ಆರೋಪಿಸಿದೆ.
ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಎಪಿ ರಾಷ್ಟ್ರೀಯ ವಕ್ತಾರ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು, ಶಾಸಕರಾದ ಅಜಯ್ ದತ್, ಸಂಜೀವ್ ಝಾ, ಸೋಮನಾಥ್ ಭಾರತಿ ಮತ್ತು ಕುಲದೀಪ್ ಕುಮಾರ್ ಅವರನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ)ದ ನಾಯಕರು ಸಂಪರ್ಕಿಸಿದ್ದಾರೆ ಎಂದು ಹೇಳಿದರು.
"ಈ ನಾಲ್ವರು ಎಎಪಿ ಶಾಸಕರು ಬಿಜೆಪಿಗೆ ಸೇರಿದರೆ ತಲಾ 20 ಕೋಟಿ ರೂ. ಮತ್ತು ಇತರ ಶಾಸಕರನ್ನು ತಮ್ಮೊಂದಿಗೆ ಕರೆತಂದರೆ 25 ಕೋಟಿ ರೂ.ಗಳನ್ನು ನೀಡುವ ಭರವಸೆ ನೀಡಲಾಗಿದೆ" ಎಂದು ಸಂಜ್ ಸಿಂಗ್ ದೂರಿದ್ದಾರೆ.
"ನಮ್ಮ ಶಾಸಕರು ಆಫರ್ ಒಪ್ಪಿಕೊಂಡು ಬಿಜೆಪಿ ಸೇರದಿದ್ದರೆ (ದೆಹಲಿ ಉಪಮುಖ್ಯಮಂತ್ರಿ) ಮನೀಶ್ ಸಿಸೋಡಿಯಾ ಅವರಂತೆ ಸಿಬಿಐ ಮತ್ತು ಇಡಿ ದಾಖಲಿಸುವ ಸುಳ್ಳು ಪ್ರಕರಣಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿರುವುದಾಗಿ" ಎಎಪಿ ನಾಯಕ ಹೇಳಿದ್ದಾರೆ.
ಇನ್ನು ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, ಇದು "ಬಹಳ ಗಂಭೀರ ವಿಷಯ" ಮತ್ತು "ಪರಿಸ್ಥಿತಿಯ ಅವಲೋಕನಕ್ಕಾಗಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯ(ಪಿಎಸಿ) ಸಭೆಯನ್ನು ಸಂಜೆ 4 ಗಂಟೆಗೆ ತಮ್ಮ ನಿವಾಸದಲ್ಲಿ ಕರೆಯಲಾಗಿದೆ" ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


