ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 10,649 ಹೊಸ ಪ್ರಕರಣ, 36 ಜನರು ಸೋಂಕಿನಿಂದ ಸಾವು

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 10,649 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,43,68,195ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 10,649 ಹೊಸ ಪ್ರಕರಣ, 36 ಜನರು ಸೋಂಕಿನಿಂದ ಸಾವು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 10,649 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,43,68,195ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ 36 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಈವರೆಗೆ 5,27,452 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿ ಸದ್ಯ ಸಕ್ರಿಯ ಪ್ರಕರಣಗಳು 96,442ಕ್ಕೆ ಇಳಿಕೆಯಾಗಿವೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.22ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರವು ಶೇ 98.59ರಷ್ಟಿದೆ. 24 ಗಂಟೆಗಳಲ್ಲಿ 10,677 ಜನರು ಗುಣಮುಖರಾಗಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇ 2.62ರಷ್ಟಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 3.32ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 210.58 ಕೋಟಿ ಕೋವಿಡ್ ವಿರುದ್ಧದ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.