ಗುಜರಾತ್ ಚುನಾವಣೆ: ಸೆಪ್ಟೆಂಬರ್ 5 ರಂದು ಕಾಂಗ್ರೆಸ್ ಪ್ರಚಾರಕ್ಕೆ ರಾಹುಲ್ ಗಾಂಧಿ ಚಾಲನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೆಪ್ಟೆಂಬರ್ 5 ರಂದು ಬಿಜೆಪಿ ಆಡಳಿತವಿರುವ ಗುಜರಾತ್ ಗೆ ಭೇಟಿ ನೀಡುತ್ತಿದ್ದು, ಇದೇ ವೇಳೆ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಅಹಮದಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೆಪ್ಟೆಂಬರ್ 5 ರಂದು ಬಿಜೆಪಿ ಆಡಳಿತವಿರುವ ಗುಜರಾತ್ ಗೆ ಭೇಟಿ ನೀಡುತ್ತಿದ್ದು, ಇದೇ ವೇಳೆ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಪ್ರತಿಪಕ್ಷ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಸೆಪ್ಟೆಂಬರ್ 15ಕ್ಕೂ ಮುನ್ನ ಈ ವರ್ಷಾಂತ್ಯದಲ್ಲಿ ನಡೆಯುವ ಗುಜರಾತ್ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಬುಧವಾರ ತಿಳಿಸಿದ್ದಾರೆ.
"ಸೆಪ್ಟೆಂಬರ್ 5 ರಂದು ರಾಹುಲ್ ಗಾಂಧಿಯವರು ವಿಧಾನಸಭಾ ಚುನಾವಣಾ ಪ್ರಚಾರವನ್ನು ಪ್ರಾರಂಭಿಸುತ್ತಾರೆ. ಅವರು ಇಲ್ಲಿಗೆ (ಅಹಮದಾಬಾದ್) ಆಗಮಿಸುತ್ತಾರೆ ಮತ್ತು ಚುನಾವಣಾ ಸಿದ್ಧತೆಗಳ ಕುರಿತು ಬೃಹತ್ ಕಾರ್ಯಕ್ರಮ ನಡೆಸಲಿದ್ದಾರೆ” ಎಂದು ವೇಣುಗೋಪಾಲ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸುಮಾರು ಮೂರು ದಶಕಗಳ ಕಾಲ ಅಧಿಕಾರದಿಂದ ಹೊರಗುಳಿದಿರುವ ಗುಜರಾತ್‌ನಲ್ಲಿ ಕಾಂಗ್ರೆಸ್, 90 ದಿನಗಳ ಚುನಾವಣಾ ಕಾರ್ಯಕ್ರಮವನ್ನು ಪ್ರಾರಂಭಿಸಿದೆ ಎಂದು ವೇಣುಗೋಪಾಲ್ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ತಮ್ಮ ನೇತೃತ್ವದಲ್ಲಿ ಸೆಪ್ಟೆಂಬರ್ 7 ರಂದು ಪಕ್ಷದ "ಭಾರತ್ ಜೋಡೋ ಯಾತ್ರೆ" ಪ್ರಾರಂಭವಾಗುವ ಎರಡು ದಿನಗಳ ಮೊದಲು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


