ವೈದ್ಯಕೀಯ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿರುವ ಸೋನಿಯಾ ಗಾಂಧಿ: ಪ್ರಿಯಾಂಕಾ, ರಾಹುಲ್ ಸಾಥ್!
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ವಿದೇಶಕ್ಕೆ ತೆರಳಲಿದ್ದು, ಅವರ ಜೊತೆಗೆ ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ತೆರಳಿಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ವಿದೇಶಕ್ಕೆ ತೆರಳಲಿದ್ದು, ಅವರ ಜೊತೆಗೆ ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ತೆರಳಿಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಆದರೆ ಯಾವಾಗ ಹೋಗುತ್ತಿದ್ದಾರೆ ಅಥವಾ ಯಾವ ಸ್ಥಳಕ್ಕೆ ಹೋಗುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿಸಿಲ್ಲ. ಆದರೆ ಸೆಪ್ಟಂಬರ್ 4ರಂದು ರಾಹುಲ್ ಗಾಂಧಿ ಅವರು 'ಮೆಹಂಗಾಯಿ ಪರ್ ಹಲ್ಲಾ ಬೋಲ್' ಅಭಿಯಾನದಲ್ಲಿ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.
'ವೈದ್ಯಕೀಯ ಪರೀಕ್ಷೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿದೇಶಕ್ಕೆ ತೆರಳಲಿದ್ದಾರೆ. ನವದೆಹಲಿಗೆ ವಾಪಸ್ ಆಗುವ ಮುನ್ನ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ಭೇಟಿ ಮಾಡಲಿದ್ದಾರೆ. ಸೋನಿಯಾ ಅವರ ಜೊತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಹೋಗುತ್ತಿದ್ದಾರೆ. ಸೆಪ್ಚೆಂಬರ್ 4ರಂದು 'ಮೆಹಂಗಾಯಿ ಪರ್ ಹಲ್ಲಾ ಬೋಲ್' ಅಭಿಯಾನವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ' ಎಂದು ಜೈರಾಮ್ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


