ಚಿಕಿತ್ಸೆಗಾಗಿ ಕರೆತಂದ ವೇಳೆ ಉತ್ತರ ಪ್ರದೇಶದ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿ!
ಚಿಕಿತ್ಸೆಗಾಗಿ ಕರೆತರಲಾಗಿದ್ದ ವೇಳೆ ಜಿಲ್ಲಾ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿಯೊಬ್ಬ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸೋನಭದ್ರಾ: ಚಿಕಿತ್ಸೆಗಾಗಿ ಕರೆತರಲಾಗಿದ್ದ ವೇಳೆ ಜಿಲ್ಲಾ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿಯೊಬ್ಬ ಪರಾರಿಯಾಗಿದ್ದಾನೆ ಎಂದು ಉತ್ತರ ಪ್ರದೇಶದ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಪಾನ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಲಲ್ಲು ಕೇವತ್ ಎಂಬಾತ 2020ರ ಏಪ್ರಿಲ್ 10 ರಿಂದ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿತ್ತು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಕುಮಾರ್ ತಿಳಿಸಿದ್ದಾರೆ.
ನಾಲ್ವರು ಕಾನ್‌ಸ್ಟೆಬಲ್‌ಗಳು ಆತನನ್ನು ಮಂಗಳವಾರ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು.
ಪೆಥಾಲಜಿ ಬಳಿ ಲಲ್ಲು ಅವರನ್ನು ಕೂರಿಸಿಕೊಂಡಿರುವಾಗ ಕಾನ್ಸ್‌ಟೇಬಲ್ ಒಬ್ಬರು ಎಲ್ಲೋ ಹೋಗಿದ್ದರು. ಇದನ್ನೇ ನೋಡುತ್ತಿದ್ದ ಆತ ಪರಾರಿಯಾಗಿದ್ದಾನೆ. ಬಳಿಕ, ಕಾನ್‌ಸ್ಟೆಬಲ್‌ಗಳು ಆತನನ್ನು ಹುಡುಕಿದರು ಕೂಡ ಆತ ಪತ್ತೆಯಾಗಿಲ್ಲ ಎಂದು ಕುಮಾರ್ ಹೇಳಿದರು.
ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಲೋಪ ಎಸಗಿದ ಕಾನ್‌ಸ್ಟೆಬಲ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಮತ್ತು ವಿಚಾರಣಾಧೀನ ಲಲ್ಲುನನ್ನು ಶೀಘ್ರ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


