ಕೋವಿಡ್-19: ಕಳೆದ 24 ಗಂಟೆಗಳಲ್ಲಿ 10,725 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,725 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,78,920 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 94,047 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,725 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,78,920 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 94,047 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಗುರುವಾರ ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ 26 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಈ ಪೈಕಿ ಕೇರಳದಲ್ಲೇ ಐವರು ಮೃತಪಟ್ಟಿದ್ದಾರೆ. ಈವರೆಗೆ ದೇಶದಲ್ಲಿ5,27,488 ಜನರು ಕೊರೊನಾವೈರಸ್ ಸೋಂಕಿನಿಂದಾಗಿ ಪ್ರಾಣಕಳೆದುಕೊಂಡಿದ್ದಾರೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 1.21ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರವು ಶೇ 98.60ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಈವರೆಗೆ 4,37,57,385 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ದೈನಂದಿನ ಪಾಸಿಟಿವಿಟಿ ದರ 2.73ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 3.20ರಷ್ಟಿದೆ.
ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 210.82 ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


