ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ, ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿ, ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿ, ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ಕಮಲ್‌ಕೋಟೆ ಪ್ರದೇಶದ ಮಡಿಯನ್ ನಾನಕ್ ಪೋಸ್ಟ್ ಬಳಿ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ.
"ಸೈನ್ಯ ಮತ್ತು ಬಾರಾಮುಲ್ಲಾ ಪೊಲೀಸರು ಉರಿಯ ಕಮಲ್ ಕೋಟೆ ಸೆಕ್ಟರ್‌ನಲ್ಲಿರುವ ಮಡಿಯನ್ ನಾನಕ್ ಪೋಸ್ಟ್ ಬಳಿ ಮೂವರು ನುಸುಳುಕೋರರನ್ನು ಹತ್ಯೆ ಮಾಡಿದ್ದಾರೆ" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


