ಅನರ್ಹತೆ ಭೀತಿ: ಯುಪಿಎ ಶಾಸಕರ ಸಭೆ ಕರೆದ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್
ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಅಡಿಯಲ್ಲಿ ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಶಿಫಾರಸು ಮಾಡಿದ ಮಾರನೇ ದಿನ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಶುಕ್ರವಾರ...

ನವದೆಹಲಿ/ರಾಂಚಿ: ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಅಡಿಯಲ್ಲಿ ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಶಿಫಾರಸು ಮಾಡಿದ ಮಾರನೇ ದಿನ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಶುಕ್ರವಾರ ಯುಪಿಎ ಶಾಸಕರ ಸಭೆ ಕರೆದಿದ್ದಾರೆ.
ಮುಂದಿನ ರಾಜಕೀಯ ತಂತ್ರಗಾರಿಕೆ ಕುರಿತು ಶಾಸಕರೊಂದಿಗೆ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಚುನಾವಣಾ ಆಯೋಗವು ತನ್ನ ವರದಿಯನ್ನು ಗುರುವಾರ ರಾಜ್ಯಪಾಲ ರಮೇಶ್ ಬೈಸ್‌ಗೆ ಸಲ್ಲಿಸಿದೆ ಎಂಬ ವರದಿಗಳ ನಂತರ, ಇದಕ್ಕೆ ಪ್ರತಿಪಕ್ಷ ಬಿಜೆಪಿಯೇ ಕಾರಣ ಎಂದು ದೂಷಿಸಿದ್ದರು. ಬಿಜೆಪಿ ನಾಯಕರು ಮತ್ತು ಅವರ ಕೈಗೊಂಬೆಗಳು ಮುಚ್ಚಿದ ಕವರ್‌ನಲ್ಲಿರುವ ವರದಿಯನ್ನು ಸಿದ್ಧಪಡಿಸಿರುವಂತೆ ತೋರುತ್ತಿದೆ ಎಂದು ಸೋರೆನ್ ಆರೋಪಿಸಿದ್ದರು.
ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅನರ್ಹತೆ ಭೀತಿ ಎದುರಿಸುತ್ತಿದ್ದು, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಕೇಂದ್ರ ಚುನಾವಣಾ ಆಯೋಗ ಶಿಫಾರಸು ಮಾಡಿದೆ ಎನ್ನಲಾಗಿದೆ. ಈ ಕುರಿತು ಹಲವು ಮಾಧ್ಯಮಗಳು ವರದಿ ಮಾಡಿದ್ದು, ಈ ಕುರಿತು ಚುನಾವಣಾ ಆಯೋಗ ಮಾತ್ರ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


