100 ದಿನಗಳಿಗಿಂತ ಕಡಿಮೆ ಅವಧಿಯಲ್ಲಿ, ಪ್ರಮುಖ ಮೂರು ಕ್ಷೇತ್ರಗಳತ್ತ ಸಿಜೆಐ ಯುಯು ಲಲಿತ್ ಗಮನ!
ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಶನಿವಾರ ದೇಶದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನವದೆಹಲಿ: ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಶನಿವಾರ ದೇಶದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು 100 ದಿನಗಳಿಗಿಂತ ಕಡಿಮೆ ಅವಧಿಯನ್ನು ಹೊಂದಿರುವ ಆರನೇ ಸಿಜೆಐ ಆಗಿದ್ದಾರೆ.
ಲಲಿತ್ ಅವರು ನವೆಂಬರ್ 8 ರಂದು 74 ದಿನಗಳ ಅಧಿಕಾರಾವಧಿಯೊಂದಿಗೆ ಹುದ್ದೆ ತ್ಯಜಿಸಲಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶರು 65 ನೇ ವಯಸ್ಸಿಗೆ ನಿವೃತ್ತರಾಗುತ್ತಾರೆ ಮತ್ತು ಹೈಕೋರ್ಟ್ ನ್ಯಾಯಾಧೀಶರು 62 ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.
ಲಲಿತ್ ಅವರು ನ್ಯಾಯಾಂಗದ ಮುಖ್ಯಸ್ಥರಾಗಿ ತಮ್ಮ 74 ದಿನಗಳ ಅಧಿಕಾರಾವಧಿಯಲ್ಲಿ ಪ್ರಕರಣಗಳ ಪಟ್ಟಿ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ತುರ್ತು ವಿಷಯಗಳನ್ನು ಪ್ರಸ್ತಾಪಿಸುವುದು ಸೇರಿದಂತೆ ಮೂರು ಪ್ರಮುಖ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಉದ್ದೇಶಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ಕನಿಷ್ಠ ಒಂದು ಸಾಂವಿಧಾನಿಕ ಪೀಠ ಇಡೀ ವರ್ಷ ಕಾರ್ಯನಿರ್ವಹಿಸುವಂತೆ ಪ್ರಯತ್ನಿಸುವುದಾಗಿ ಅವರು ಹೇಳಿದ್ದಾರೆ.
ನ್ಯಾಯಮೂರ್ತಿ ಎನ್.ವಿ. ರಮಣ ಅವರ ಬೀಳ್ಗೂಡುಗೆ ಸಮಾರಂಭದಲ್ಲಿ ಮಾತನಾಡಿದ ನ್ಯಾಯಮೂರ್ತಿ ಲಲಿತ್, ಪ್ರಕರಣಗಳ ಪಟ್ಟಿಯನ್ನು ಸಾಧ್ಯವಾದಷ್ಟು ಸರಳವಾಗಿ, ಸ್ಪಷ್ಟವಾಗಿ ಮತ್ತು ಪಾರದರ್ಶಕವಾಗಿ ಮಾಡಲು ನಾವು ಶ್ರಮಿಸುತ್ತೇವೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದರು.
ನ್ಯಾಯಮೂರ್ತಿ ಲಲಿತ್ ಸಿಜೆಐ ಆಗಿರುವ ಅವಧಿಯಲ್ಲಿ, ಸಾಂವಿಧಾನಿಕ ಪೀಠದ ವಿಷಯಗಳು ಸೇರಿದಂತೆ ಹಲವು ಪ್ರಮುಖ ಪ್ರಕರಣಗಳು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಆಗಸ್ಟ್ 29 ರಿಂದ ಪಂಚ ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದ ವಿಚಾರವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಇತ್ತೀಚಿಗೆ ಹೇಳಿತ್ತು.
ಆಗಸ್ಟ್ 13, 2014 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಳ್ಳುವ ಮೊದಲು ಹಿರಿಯ ವಕೀಲರಾಗಿದ್ದ ನ್ಯಾಯಮೂರ್ತಿ ಲಲಿತ್, ತ್ರಿವಳಿ ತಲಾಖ್ ನಿಷೇಧ ಸೇರಿದಂತೆ ಹಲವು ಮಹತ್ವದ ತೀರ್ಪುಗಳಲ್ಲಿ ಭಾಗವಾಗಿದಿದ್ದರು.
ಜನವರಿ 2019 ರಲ್ಲಿ, ಅವರು ರಾಜಕೀಯವಾಗಿ-ಸೂಕ್ಷ್ಮ ವಿಚಾರವಾಗಿದ್ದ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದಿಂದ ಹಿಂದೆ ಸರಿದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


