ಜಾರ್ಖಂಡ್ ರಾಜಕೀಯ ಬಿಕ್ಕಟ್ಟು: ಜೆಎಂಎಂ- ಕಾಂಗ್ರೆಸ್ ಶಾಸಕರ ಸ್ಥಳಾಂತರ
ಜಾರ್ಖಂಡ್ ನಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದ್ದು, ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಅವರ ಮೈತ್ರಿ ಪಕ್ಷ ಕಾಂಗ್ರೆಸ್ ತಮ್ಮ ಶಾಸಕರನ್ನು ಅಪರಿಚಿತ ಸ್ಥಳವೊಂದಕ್ಕೆ ಸ್ಥಳಾಂತರಿಸಿದೆ ಎಂದು ವರದಿಯಾಗಿದೆ.

ರಾಂಚಿ: ಜಾರ್ಖಂಡ್ ನಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದ್ದು, ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಅವರ ಮೈತ್ರಿ ಪಕ್ಷ ಕಾಂಗ್ರೆಸ್ ತಮ್ಮ ಶಾಸಕರನ್ನು ಅಪರಿಚಿತ ಸ್ಥಳವೊಂದಕ್ಕೆ ಸ್ಥಳಾಂತರಿಸಿದೆ ಎಂದು ವರದಿಯಾಗಿದೆ.
ಸಭೆ ನಂತರ ರಾಂಚಿಯಲ್ಲಿರುವ ಸೊರೆನ್ ಅವರ ನಿವಾಸದಿಂದ ಎರಡು ಬಸ್ ಗಳಲ್ಲಿ ಜಾರ್ಖಂಡ್ ಶಾಸಕರನ್ನು ಕರೆದೊಯ್ಯಲಾಗಿದೆ. ಜಾರ್ಖಂಡ್ ನಲ್ಲಿ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಉಭಯ ಪಕ್ಷಗಳು ತಮ್ಮ ಶಾಸಕರನ್ನು ಬೇರೆಡೆಗೆ ಸ್ಥಳಾಂತರಿಸಿವೆ.
ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅನರ್ಹತೆ ಭೀತಿ ಎದುರಿಸುತ್ತಿದ್ದು, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಕೇಂದ್ರ ಚುನಾವಣಾ ಆಯೋಗ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.
ಬದಲಾದ ರಾಜಕೀಯ ಸನ್ನಿವೇಶದಲ್ಲಿ ಆಡಳಿತರೂಢ ಪಕ್ಷಗಳ ಶಾಸಕರ ಸಂಖ್ಯೆಯನ್ನು ಹಿಡಿದಿಟ್ಟುಕೊಳ್ಳಲು ರೆಸಾರ್ಟ್ ರಾಜಕೀಯ ಅಗತ್ಯವಿದೆ ಎಂದು ಪಕ್ಷದ ಮೂಲಗಳು ಸಮರ್ಥಿಸಿಕೊಂಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


