ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಸನ್ಮಾನಿಸುವುದು ಹಿಂದೂ ಸಂಸ್ಕೃತಿಯೇ?: ಶಿವಸೇನೆ
ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳನ್ನು ಬಿಡುಗಡೆ ಮಾಡಿರುವುದನ್ನು ಶಿವಸೇನೆ ಪ್ರಶ್ನಿಸಿದ್ದು, ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳನ್ನು ಸನ್ಮಾನ ಮಾಡಿರುವುದನ್ನು ಹಿಂದೂ ಸಂಸ್ಕೃತಿಯೇ? ಎಂದು ಕೇಳಿದೆ.

ಮುಂಬೈ: ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳನ್ನು ಬಿಡುಗಡೆ ಮಾಡಿರುವುದನ್ನು ಶಿವಸೇನೆ ಪ್ರಶ್ನಿಸಿದ್ದು, ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳನ್ನು ಸನ್ಮಾನ ಮಾಡಿರುವುದನ್ನು ಹಿಂದೂ ಸಂಸ್ಕೃತಿಯೇ? ಎಂದು ಕೇಳಿದೆ.
ಅಪರಾಧಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನೂ ಶಿವಸೇನೆ ಪ್ರಶ್ನಿಸಿದೆ. ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯದಲ್ಲಿ ಈ ಬಗ್ಗೆ ಲೇಖನ ಪ್ರಕಟಿಸಿದೆ.
2022 ರಲ್ಲಿ ಗೋಧ್ರಾ ರೈಲಿಗೆ ಬೆಂಕಿ ಬಿದ್ದಾಗ 5 ತಿಂಗಳ ಗರ್ಭಿಣಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಅಷ್ಟೇ ಅಲ್ಲದೇ ಆಕೆಯ ಮೂರು ವರ್ಷದ ಮಗಳು ಹತ್ಯೆಗೊಳಗಾದ 7 ಮಂದಿಯ ಪೈಕಿ ಇದ್ದರು. ಆ.15 ರಂದು ಗೋಧ್ರಾ ಉಪಜೈಲಿನಿಂದ 11 ಮಂದಿ ಆರೋಪಿಗಳು ಬಿಡುಗಡೆಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


