ಕೇರಳದಲ್ಲಿ ಭಾರಿ ಮಳೆ: ಭೂಕುಸಿತದಿಂದ ಒಂದೇ ಕುಟುಂಬದ ಐವರು ಸಾವು; 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಇಡುಕ್ಕಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾರಿ ಮಳೆಯಿಂದ ಸೋಮವಾರ ನಸುಕಿನಲ್ಲಿ ಉಂಟಾದ ಭೂಕುಸಿತದಿಂದಾಗಿ ಒಂದೇ ಕುಟುಂಬದ ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಸೋಮವಾರ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇಡುಕ್ಕಿ: ಇಲ್ಲಿನ ಹಳ್ಳಿಯೊಂದರಲ್ಲಿ ಭಾರಿ ಮಳೆಯಿಂದ ಸೋಮವಾರ ನಸುಕಿನಲ್ಲಿ ಉಂಟಾದ ಭೂಕುಸಿತದಿಂದಾಗಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತೋಡುಪುಳ ಸಮೀಪದ ಕಂಜರ್ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ನಿವಾಸಿಗಳಾದ ತಂಕಮ್ಮ (80), ಆಕೆಯ ಮಗ ಸೋಮನ್ (52), ಆತನ ಪತ್ನಿ ಶಾಜಿ (50), ಅವರ ಮಕ್ಕಳಾದ ಶಿಮಾ (30) ಮತ್ತು ದೇವಾನಂದ್ (5) ಎಂದು ಗುರುತಿಸಲಾಗಿದೆ.
ಬೆಳಗಿನ ಜಾವ 2.30ರ ಸುಮಾರಿಗೆ ಕುಟುಂಬದ ಮನೆಯಲ್ಲಿ ದುರಂತ ಸಂಭವಿಸಿದೆ. ರಕ್ಷಣಾ ಸಿಬ್ಬಂದಿ ಐವರ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇರಳದ ಗುಡ್ಡಗಾಡು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ.
ಕೇರಳದ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಕೇರಳದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಸೋಮವಾರ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೆ, ಗುಡ್ಡಗಾಡು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ನೀಡಿದೆ.
ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡುಗಳಿಗೆ ಸೋಮವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳವಾರ ಕಾಸರಗೋಡು ಹೊರತುಪಡಿಸಿ 13 ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಬುಧವಾರ ಪಾಲಕ್ಕಾಡ್ ಹೊರತುಪಡಿಸಿ 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
ಕೇರಳ ಮತ್ತು ಲಕ್ಷದ್ವೀಪದ ಕರಾವಳಿಯಲ್ಲಿ ಸೆಪ್ಟೆಂಬರ್ 1 ರವರೆಗೆ ಮೀನುಗಾರಿಕೆಯನ್ನು ಅಧಿಕಾರಿಗಳು ನಿಷೇಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


