ದೇಶ

ರಾಷ್ಟ್ರೀಯ ಕ್ರೀಡಾ ದಿನ: ಮೇಜರ್ ಧ್ಯಾನ್ ಚಂದ್ ಜನ್ಮದಿನಾಚರಣೆ, ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ

ಇಂದು ಆಗಸ್ಟ್ 29 ರಂದು ಹಾಕಿ ಕ್ರೀಡಾ ಮಾಂತ್ರಿಕ, ಮೇಜರ್ ಧ್ಯಾನ್‌ಚಂದ್ ಸಿಂಗ್ (Major Dhyan Chand Singh) ಅವರ ಜನ್ಮದಿನ. ಈ ದಿನವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ (National sports day) ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.

ರಾಷ್ಟ್ರೀಯ ಕ್ರೀಡಾ ದಿನ: ಮೇಜರ್ ಧ್ಯಾನ್ ಚಂದ್ ಜನ್ಮದಿನಾಚರಣೆ, ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಇಂದು ಆಗಸ್ಟ್ 29 ರಂದು ಹಾಕಿ ಕ್ರೀಡಾ ಮಾಂತ್ರಿಕ, ಮೇಜರ್ ಧ್ಯಾನ್‌ಚಂದ್  ಸಿಂಗ್ (Major Dhyan Chand Singh) ಅವರ ಜನ್ಮದಿನ. ಈ ದಿನವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ (National sports day) ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.

ಭಾರತೀಯ ಕ್ರೀಡಾ ಜಗತ್ತಿನಲ್ಲಿ ಇತ್ತೀಚಿನ ವರ್ಷಗಳು ಅತ್ಯಂತ ಮಹತ್ವದ್ದಾಗಿದೆ. ಈ ಸ್ಥಿತಿಗತಿ ಹಾಗೆಯೇ ಮುಂದುವರಿಯಲಿ. ದೇಶದಲ್ಲಿ ಕ್ರೀಡಾ ಜಗತ್ತು ಇನ್ನಷ್ಟು ಬೆಳಗಲಿ ಎಂದು ಹೇಳಿದ್ದಾರೆ.

ಭಾರತದ ಹಾಕಿ ಪಂದ್ಯದ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನಾಚಪಣೆ ಅಂಗವಾಗಿ ಕ್ರೀಡಾದಿನ ಆಚರಿಸಲಾಗುತ್ತದೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಆಗಸ್ಟ್ 29, 1905ರಲ್ಲಿ ಜನಿಸಿದ ಧ್ಯಾನ್ ಚಂದ್ ಹಾಕಿ ಜಗತ್ತಿನಲ್ಲಿ ಮೆರೆದು ಇತಿಹಾಸ ಸೃಷ್ಟಿಸಿದರು. 1936ರಲ್ಲಿ ಬರ್ಲಿನ್ ನಲ್ಲಿ ನಡೆದ ಒಲಿಂಪಿಕ್ ನಲ್ಲಿ ಚಿನ್ನ ಗೆದ್ದ ಭಾರತ ತಂಡದ ನಾಯಕರಾಗಿದ್ದರು. 

ಭಾರತದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಕ್ರೀಡಾ ದಿನವನ್ನು 2012ರಲ್ಲಿ ಆಚರಿಸಲಾಯಿತು. ಈ ದಿನ ಕ್ರೀಡೆಯಲ್ಲಿ ಅದ್ವಿತೀಯ ಸಾಧನೆ ತೋರಿದ ಕ್ರೀಡಾಪಟುಗಳನ್ನು ರಾಷ್ಟ್ರಪತಿಗಳು ಗೌರವಿಸುತ್ತಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.