ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,231 ಹೊಸ ಪ್ರಕರಣ, ಕೇರಳದಲ್ಲೇ ಅಧಿಕ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,231 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,28,393ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,231 ಹೊಸ ಪ್ರಕರಣ, ಕೇರಳದಲ್ಲೇ ಅಧಿಕ ಸಾವು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,231 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,28,393ಕ್ಕೆ ಏರಿಕೆಯಾಗಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 64,667ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 10 ಜನರು ಸೇರಿದಂತೆ ಇದೇ ಅವಧಿಯಲ್ಲಿ 45 ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಈವರೆಗೆ ಒಟ್ಟು 5,27,874 ಜನರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.15ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರ ಶೇ 98.67ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 2.05ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19 ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 2.55 ದಾಖಲಾಗಿದೆ.

ದೇಶದಲ್ಲಿ ಈವರೆಗೆ ಕೋವಿಡ್‌ನಿಂದ 4,38,35,852 ಜನರು ಚೇತರಿಸಿಕೊಂಡಿದ್ದಾರೆ. ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 212.39 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.