ಶಾಲಾ ಶಿಕ್ಷಕರ ನೇಮಕಾತಿ ಹಗರಣ: ಪಾರ್ಥ ಚಟರ್ಜಿ, ಅರ್ಪಿತಾ ಮುಖರ್ಜಿ ನ್ಯಾಯಾಂಗ ಬಂಧನ ವಿಸ್ತರಣೆ
ಶಾಲಾ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ತೃಣಮೂಲಕ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಕೋಲ್ಕತಾ: ಶಾಲಾ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ತೃಣಮೂಲಕ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಶಾಲಾ ಸೇವಾ ಆಯೋಗದ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಅವರ ನ್ಯಾಯಾಂಗ ಬಂಧನವನ್ನು ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಬುಧವಾರ ಸೆಪ್ಟೆಂಬರ್ 14 ರವರೆಗೆ ವಿಸ್ತರಿಸಿದೆ.
ಕೋಲ್ಕತ್ತಾದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ನ್ಯಾಯಾಲಯವು ಈ ಹಿಂದೆ ಆಗಸ್ಟ್ 31 ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿತ್ತು. ಇದೀಗ ಮತ್ತೆ ಸೆಪ್ಟೆಂಬರ್ 14 ರವರೆಗೆ ವಿಸ್ತರಿಸಿದೆ.
ಏನಿದು ಪ್ರಕರಣ?
ಪಾರ್ಥ ಚಟರ್ಜಿ ಮತ್ತುು ಅರ್ಪಿತಾ ಮುಖರ್ಜಿ ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಅಕ್ರಮ ನೇಮಕಾತಿಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜುಲೈ 23 ರಂದು ಬಂಧನಕ್ಕೊಳಗಾಗಿದ್ದರು. ಪಾರ್ಥ ಚಟರ್ಜಿ ಅವರ ಒಡೆತನದ ಫ್ಲಾಟ್ ಗಳಿಂದ 49.8 ಕೋಟಿ ರೂ. ನಗದು, ಅಪಾರ ಪ್ರಮಾಣದ ಚಿನ್ನಾಭರಣ, ಆಸ್ತಿಗಳ ದಾಖಲೆಗಳು ಮತ್ತಿಬ್ಬರು ಆರೋಪಿಗಳು ಹೊಂದಿರುವ ಕಂಪನಿಯ ಜಂಟಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಹೇಳಿಕೊಂಡಿದೆ.
ಪಾರ್ಥ ಚಟರ್ಜಿ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಚಿವ ಸ್ಥಾನದಿಂದ ಕಿತ್ತೆಸೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಅವರು ಹೊಂದಿದ್ದ ಎಲ್ಲಾ ಹುದ್ದೆಗಳಿಂದ ತೆರವು ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


