ಗುಜರಾತ್ ಚುನಾವಣೆ: ಮೊದಲನೆ ಹಂತದ ಮತದಾನ ಮುಕ್ತಾಯ, ಶೇ.59.24 ರಷ್ಟು ಮತದಾನ
ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲನೆ ಹಂತದ ಮತದಾನ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದ್ದು, ಸಂಜೆ 5 ಗಂಟೆಯವರೆಗೆ ಶೇ. 59.24 ರಷ್ಟು ಮತದಾನವಾಗಿದೆ.

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲನೆ ಹಂತದ ಮತದಾನ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದ್ದು, ಸಂಜೆ 5 ಗಂಟೆಯವರೆಗೆ ಶೇ. 59.24 ರಷ್ಟು ಮತದಾನವಾಗಿದೆ.
ಇಂದು ಬೆಳಗ್ಗೆ 8 ಗಂಟೆಯಿಂದ ಬಿಗಿ ಭದ್ರತೆಯೊಂದಿಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ಶೇ.59.24 ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ 27 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಈಗ ಮತ್ತೆ ಅಧಿಕಾರಕ್ಕೆ ಬರಲು ತೀವ್ರ ಹೋರಾಟ ನಡೆಸುತ್ತಿದೆ.
ಮೊದಲ ಹಂತದಲ್ಲಿ, ಸೌರಾಷ್ಟ್ರ-ಕಚ್ ಪ್ರದೇಶ ಮತ್ತು ದಕ್ಷಿಣ ಭಾಗಗಳು ಸೇರಿದಂತೆ ಒಟ್ಟು 19 ಜಿಲ್ಲೆಗಳ 89 ವಿಧಾನಸಭಾ ಕ್ಷೇತ್ರಳಲ್ಲಿ ಇಂದು ಮತದಾನ ನಡೆದಿದ್ದು, ಒಟ್ಟು 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲಾ 89 ಸ್ಥಾನಗಳಲ್ಲಿ ಸ್ಪರ್ಧಿಸುದ್ದು, ಹೊಸದಾಗಿ ಎಂಟ್ರಿಕೊಟ್ಟಿರುವ ಎಎಪಿ 88 ಸ್ಥಾನಗಳಲ್ಲಿ ಸ್ಪರ್ಧಿಸಿದೆ. 339 ಪಕ್ಷೇತರ ಅಭ್ಯರ್ಥಿಗಳು ಸಹ ಕಣದಲ್ಲಿದ್ದಾರೆ.
ಚುನಾವಣೆಯಲ್ಲಿ ಕೇವಲ 70 ಮಹಿಳಾ ಅಭ್ಯರ್ಥಿಗಳು ಮಾತ್ರ ಕಣದಲ್ಲಿದ್ದು, ಬಿಜೆಪಿಯಿಂದ ಒಂಬತ್ತು, ಕಾಂಗ್ರೆಸ್‌ನಿಂದ ಆರು ಮತ್ತು ಎಎಪಿಯಿಂದ ಐವರು ಸ್ಪರ್ಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


