ಜಾರ್ಖಂಡ್: ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ಗೆ ಸೇರಿದ 88.77 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಅಮಾನತುಗೊಂಡ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರಿಗೆ ಸೇರಿದ ರಾಂಚಿಯಲ್ಲಿರುವ 88.77 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಗುರುವಾರ...

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಅಮಾನತುಗೊಂಡ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರಿಗೆ ಸೇರಿದ ರಾಂಚಿಯಲ್ಲಿರುವ 88.77 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಜಪ್ತಿ ಮಾಡಿದೆ.
ಎಮ್ಜಿಎನ್ಆರ್ಇಜಿಎ ಹಣದ ದುರುಪಯೋಗ ಮತ್ತು ಇತರ ಆರೋಪಗಳಿಗೆ ಸಂಬಂಧಿಸಿದಂತೆ ಮೇ 11 ರಂದು ಸುಮಾರು 15 ಗಂಟೆಗಳ ಕಾಲ ವಿಚಾರಣೆಯ ನಂತರ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಪೂಜಾ ಸಿಂಘಾಲ್ ಅವರನ್ನು ಇಡಿ ಬಂಧಿಸಿತ್ತು.
2000 ಬ್ಯಾಚ್ನ ಐಎಎಸ್ ಅಧಿಕಾರಿ ಪೂಜಾಗೆ ಸೇರಿದ 88.77 ಕೋಟಿ ರೂ ಮೌಲ್ಯದ ಸ್ಥಿರ ಆಸ್ತಿಗಳನ್ನು ಇಡಿ ಜಪ್ತಿ ಮಾಡಿದೆ. ಜಪ್ತಿ ಮಾಡಿದ ಆಸ್ತಿಗಳಲ್ಲಿ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಅಂದರೆ ಪಲ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಒಂದು ಡಯಾಗ್ನೋಸ್ಟಿಕ್ ಸೆಂಟರ್ ಅಂದರೆ ಪಲ್ಸ್ ಡಯಾಗ್ನೋಸ್ಟಿಕ್ ಮತ್ತು ಇಮ್ಯಾಜಿನಿಂಗ್ ಸೆಂಟರ್ ಹಾಗೂ ರಾಂಚಿಯಲ್ಲಿರುವ ಎರಡು ನಿವೇಶನಗಳು ಸೇರಿವೆ ಎಂದು ಪ್ರಕಟಣೆ ತಿಳಿಸಿದೆ.
2008 ಮತ್ತು 2011 ರ ನಡುವೆ 18.06 ಕೋಟಿ ರೂಪಾಯಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಕಿರಿಯ ಎಂಜಿನಿಯರ್ ರಾಮ್ ಬಿನೋದ್ ಪ್ರಸಾದ್ ಸಿನ್ಹಾ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳವು 2017 ರಲ್ಲಿ ದಾಖಲಿಸಿದ ಎಫ್ಐಆರ್ ಅನ್ನು ಆಧರಿಸಿ ಇಡಿ ಪೂಜಾ ಸಿಂಘಾಲ್ ವಿರುದ್ಧ ತನಿಖೆ ನಡೆಸುತ್ತಿದೆ. ತರುವಾಯ, ಇಡಿ ಸಿನ್ಹಾಗೆ ಸೇರಿದ 4.8 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು ಮತ್ತು 2020ರಲ್ಲಿ ಅವರ ವಿರುದ್ಧ ಎರಡು ಚಾರ್ಜ್ಶೀಟ್ಗಳನ್ನು ಸಲ್ಲಿಸಿತು. ತನಿಖೆ ಸಮಯದಲ್ಲಿ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಹೆಸರು ಕೂಡ ಕೇಳಿಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


