ಗುಜರಾತ್ ಚುನಾವಣೆ: ದಲಿತರಿಗೆ, ಹಿಂದುಳಿದವರಿಗೆ ಹೋಗುತ್ತದೆ ಎಂದು ಸರ್ಕಾರ 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಲ್ಲ- ಖರ್ಗೆ ಆರೋಪ
ಸರ್ಕಾರ ಹಾಗೂ ಅರೆ ಸರ್ಕಾರಿ ಇಲಾಖೆಗಳು ಸಂಸ್ಥೆಗಳಲ್ಲಿ ಖಾಲಿ ಇರುವ 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡದೇ ಇರುವ ವಿಷಯವಾಗಿ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ.

ಅಹ್ಮದಾಬಾದ್: ಗುಜರಾತ್ ನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸರ್ಕಾರ ಹಾಗೂ ಅರೆ ಸರ್ಕಾರಿ ಇಲಾಖೆಗಳು ಸಂಸ್ಥೆಗಳಲ್ಲಿ ಖಾಲಿ ಇರುವ 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡದೇ ಇರುವ ವಿಷಯವಾಗಿ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ.
ಹುದ್ದೆಗಳನ್ನು ಭರ್ತಿ ಮಾಡಿದರೆ 5 ಲಕ್ಷ ಉದ್ಯೋಗಗಳ ಪೈಕಿ ಅರ್ಧದಷ್ಟು ಉದ್ಯೋಗಗಳು ದಲಿತ, ಬುಡಕಟ್ಟು, ಹಿಂದುಳಿದ ಸಮುದಾಯಗಳಿಗೆ ಹೋಗುತ್ತವೆ. ಆದ್ದರಿಂದ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ ಎಂದು ಖರ್ಗೆ ಆರೋಪಿಸಿದ್ದಾರೆ.
ಎಸ್ ಟಿ ಮೀಸಲು ವಿಧಾನಸಭಾ ಕ್ಷೇತ್ರವಾದ ಭಿಲೋಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಖರ್ಗೆ, ಬಿಜೆಪಿ ಆಡಳಿತವಿರುವ ಈ ರಾಜ್ಯದಲ್ಲಿ ದಲಿತರು, ಹಿಂದುಳಿದವರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ.17 ರಷ್ಟು ಏರಿಕೆ ಕಂಡಿದೆ ಎಂದು ಆರೋಪಿಸಿದ್ದಾರೆ.
ಗುಜರಾತ್ ನಲ್ಲಿ ಡಿ.05 ರಂದು 2 ನೇ ಹಂತದ ಮತದಾನ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಸ್ಥಳೀಯ ನಾಯಕರು ಡಬಲ್ ಇಂಜಿನ್ ಸರ್ಕಾರದ ಬಗ್ಗೆ ಮಾತನಾಡುತ್ತಾರೆ ಆದರೆ 6 ವರ್ಷಗಳಲ್ಲಿ ಮೂವರು ಮುಖ್ಯಮಂತ್ರಿಗಳು ಬದಲಾಗಿದ್ದು, ಇಂಜಿನ್ ಯಾಕೆ ವಿಫಲವಾಯಿತು ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಗುಜರಾತ್ ನಲ್ಲಿ ಕಾಂಗ್ರೆಸ್ ವಿರುದ್ಧದ ಪ್ರಚಾರಕ್ಕೆ ಪಕ್ಷದ 5 ಮುಖ್ಯಮಂತ್ರಿಗಳು, 40 ಕೇಂದ್ರ ಸಚಿವರು, 150 ಸಚಿವರ ಸೇನೆಯನ್ನು ನೆರೆ ರಾಜ್ಯಗಳಿಂದ ಕರೆದುಕೊಂಡುಬಂದಿದೆ ಎಂದು ಖರ್ಗೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


