ಗುಜರಾತ್ ಚುನಾವಣೆ: 2ನೇ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ, ಡಿಸೆಂಬರ್ 5ಕ್ಕೆ ಮತದಾನ
ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ಶನಿವಾರ ಸಂಜೆ 5 ಗಂಟೆಗೆ ತೆರೆ ಬಿದ್ದಿದೆ.

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ಶನಿವಾರ ಸಂಜೆ 5 ಗಂಟೆಗೆ ತೆರೆ ಬಿದ್ದಿದೆ.
ಡಿಸೆಂಬರ್ 5 ರಂದು ಕೊನೆಯ ಹಂತದ ಮತದಾನ ನಡೆಯಲಿದ್ದು, 93 ಕ್ಷೇತ್ರಗಳಲ್ಲಿ ಒಟ್ಟು 833 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.
ಎರಡನೇ ಹಂತದ ಪ್ರಮುಖ ಅಭ್ಯರ್ಥಿಗಳೆಂದರೆ ಘಟ್ಲೋಡಿಯಾದಿಂದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ವಿರಂಗಾಮ್‌ನಿಂದ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಮತ್ತು ಗಾಂಧಿನಗರ ದಕ್ಷಿಣದಿಂದ ಒಬಿಸಿ ನಾಯಕ ಅಲ್ಪೇಶ್ ಠಾಕೋರ್ ಅವರು ಕಣದಲ್ಲಿದ್ದಾರೆ.
ಹಾರ್ದಿಕ್ ಪಟೇಲ್ ಮತ್ತು ಠಾಕೂರ್ ಇಬ್ಬರೂ ಭಾರತೀಯ ಜನತಾ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿದ್ದಾರೆ.
ಸೌರಾಷ್ಟ್ರ, ಕಚ್ ಮತ್ತು ದಕ್ಷಿಣ ಗುಜರಾತ್‌ನ 89 ಸ್ಥಾನಗಳಿಗೆ ಮೊದಲ ಹಂತದ ಮತದಾನ ಡಿಸೆಂಬರ್ 1 ರಂದು ನಡೆದಿದ್ದು, ಶೇ. 63.31 ರಷ್ಟು ಮತದಾನವಾಗಿದೆ, ಇದು ಕಳೆದ ಬಾರಿಗಿಂತ ಕಡಿಮೆಯಾಗಿದೆ.
ಅಹಮದಾಬಾದ್, ವಡೋದರಾ ಮತ್ತು ಗಾಂಧಿನಗರ ಸೇರಿದಂತೆ ಉತ್ತರ ಮತ್ತು ಮಧ್ಯ ಗುಜರಾತ್‌ನ 14 ಜಿಲ್ಲೆಗಳಲ್ಲಿ ಸೋಮವಾರ ಮತದಾನ ನಡೆಯಲಿದ್ದು, ಆಡಳಿತರೂಢ ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


