ಮಥುರಾ: ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕತ್ತು ಹಿಸುಕಿ ಹತ್ಯೆ
ಮಥುರಾ ಜಿಲ್ಲೆಯ ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 14 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.

ಮಥುರಾ: ಮಥುರಾ ಜಿಲ್ಲೆಯ ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 14 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.
ಪೊಲೀಸರ ಪ್ರಕಾರ, ಶುಕ್ರವಾರ ರಾತ್ರಿ 8.30 ರ ಸುಮಾರಿಗೆ ಬಾಲಕಿ ತನ್ನ ಮನೆಯ ಸಮೀಪವಿರುವ ಅರಣ್ಯ ಪ್ರದೇಶದಲ್ಲಿಮಲವಿಸರ್ಜನೆಗೆ ಹೋಗಿದ್ದಳು ಮತ್ತು ಜೊತೆಗೆ ಒಂಬತ್ತು ವರ್ಷದ ತನ್ನ ತಂಗಿಯನ್ನು ಕರೆದುಕೊಂಡು ಹೋಗಿದ್ದಳು.
ಈ ವೇಳೆ ಅದೇ ಗ್ರಾಮದ ಮೂವರು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ್ದಾರೆ. ಆಕೆಯ ತಂಗಿ ಹೇಗೋ ಅಲ್ಲಿಂದ ತಪ್ಪಿಸಿಕೊಂಡು ಮನೆಯವರಿಗೆ ನಡೆದ ಘಟನೆಯನ್ನು ತಿಳಿಸಿದ್ದಾಳೆ.
ತಕ್ಷಣ ಬಾಲಕಿಯ ಮನೆಯವರು ಇತರ ಗ್ರಾಮಸ್ಥರೊಂದಿಗೆ ಹುಡುಕಾಟ ಆರಂಭಿಸಿದ್ದಾರೆ. ಈ ವೇಳೆ ಇಬ್ಬರು ಪುರುಷರನ್ನು ಹಿಡಿದಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ತ್ರಿಗುಣ್ ಬಿಸೆನ್, ಅಕ್ರೋಶಗೊಂಡ ಗ್ರಾಮಸ್ಥರನ್ನು ಸಮಾಧಾನಪಡಿಸಿದರು ಮತ್ತು ಗ್ರಾಮಸ್ಥರು ಹಿಡಿದ ಇಬ್ಬರು ವ್ಯಕ್ತಿಗಳಾದ ದೇಶರಾಜ್ ಮತ್ತು ಯೋಗೇಂದ್ರನನ್ನು ವಶಕ್ಕೆ ಪಡೆದಿದ್ದಾರೆ.
ಪರಾರಿಯಾಗಿರುವ ಮೂರನೇ ಆರೋಪಿ ಸಚಿನ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮೇಲ್ನೋಟಕ್ಕೆ ಅತ್ಯಾಚಾರದ ನಂತರ ಬಾಲಕಿಯನ್ನು ಕೊಂದಿರುವುದು ಕಂಡು ಬಂದಿದೆ ಎಂದು ಪೊಲೀಸ್ ಉಪ ಅಧೀಕ್ಷಕ ಅಲೋಕ್ ಸಿಂಗ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


