ಮಧ್ಯಪ್ರದೇಶ: ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಶಾಲಾ ಶಿಕ್ಷಕನ ಅಮಾನತು
ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಕ್ಕಾಗಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಬರ್ವಾನಿ: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಕ್ಕಾಗಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ರಾಜ್ಯದ ಬುಡಕಟ್ಟು ವ್ಯವಹಾರಗಳ ಇಲಾಖೆಯ ಅಡಿಯಲ್ಲಿರುವ ಕನಸ್ಯ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ರಾಜೇಶ್ ಕನ್ನೋಜೆ ಎಂಬುವವರನ್ನು ನವೆಂಬರ್ 25 ರಂದು ಅಮಾನತುಗೊಳಿಸಲಾಗಿದೆ. ಆದರೆ, ಅವರ ಅಮಾನಚು ಆದೇಶವು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ನಂತರ ಈ ವಿಚಾರ ಬೆಳಕಿಗೆ ಬಂದಿದೆ.
ಸೇವಾ ನೀತಿ ನಿಯಮಗಳ ಉಲ್ಲಂಘನೆ ಹಾಗೂ ರಾಜಕೀಯ ರ‍್ಯಾಲಿಯಲ್ಲಿ ಭಾಗವಹಿಸಿದ್ದಕ್ಕಾಗಿ ಕನ್ನೋಜೆ ಅವರನ್ನು ಅಮಾನತುಗೊಳಿಸಲಾಗಿದೆ.
'ಪ್ರಮುಖ ಕೆಲಸಗಳಿರುವುದನ್ನು ಉಲ್ಲೇಖಿಸಿ ಅವರು ರಜೆ ಕೋರಿದ್ದರು. ಆದರೆ, ರಾಜಕೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಅವರು ಸಾಮಾಜಿಕ ಮಾಧ್ಯಮದಲ್ಲಿ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ' ಎಂದು ಬುಡಕಟ್ಟು ವ್ಯವಹಾರಗಳ ಇಲಾಖೆಯ ಸಹಾಯಕ ಆಯುಕ್ತ ಎನ್.ಎಸ್. ರಘುವಂಶಿ ಹೇಳಿದ್ದಾರೆ.
ಆದೇಶದ ಪ್ರಕಾರ, ನವೆಂಬರ್ 24 ರಂದು ರಾಜಕೀಯ ಪಕ್ಷವೊಂದು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಗೆ ಹಾಜರಾಗುವ ಮೂಲಕ ಕನ್ನೋಜೆ ಅವರು ಸೇವಾ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


