ವಂಚಕ ಸುಕೇಶ್ ಚಂದ್ರಶೇಖರ್ ಆಪ್ತೆ ಪಿಂಕಿ ಇರಾನಿಗೆ ಡಿಸೆಂಬರ್ 21 ರವರೆಗೂ ನ್ಯಾಯಾಂಗ ಬಂಧನ
200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ವಂಚಕ ಸುಕೇಶ್ ಚಂದ್ರಶೇಖರ್ ಆಪ್ತೆ ಪಿಂಕಿ ಇರಾನಿಯನ್ನು ಡಿ.21ರವರೆಗೂ ದೆಹಲಿ ನ್ಯಾಯಾಲಯವೊಂದು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ನವದೆಹಲಿ: 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ವಂಚಕ ಸುಕೇಶ್ ಚಂದ್ರಶೇಖರ್ ಆಪ್ತೆ ಪಿಂಕಿ ಇರಾನಿಯನ್ನು ಡಿ.21ರವರೆಗೂ ದೆಹಲಿ ನ್ಯಾಯಾಲಯವೊಂದು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಮುಂಬೈ ಮೂಲದ ಪಿಂಕಿ ಇರಾನಿ ಚಂದ್ರಶೇಖರ್ ನ ಆಪ್ತೆಯಾಗಿದ್ದು, ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆತನಿಗೆ ಪರಿಚಯಿಸಿದ್ದಳು ಎನ್ನಲಾಗಿದೆ.
ಆಕೆಯ ನ್ಯಾಯಾಂಗ ಬಂಧನ ಕೋರಿ ದೆಹಲಿ ಅಪರಾಧ ವಿಭಾಗದ ಪೊಲೀಸರು ಸಲ್ಲಿಸಿದ ವರದಿಯನ್ನು ಪರಿಗಣಿಸಿದ ನಂತರ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದ್ರ ಮಲ್ಲಿಕ್ ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 30 ರಂದು ಆರೋಪಿಯನ್ನು ಬಂಧಿಸಲಾಗಿದ್ದು, ಸೂಕ್ತ ರೀತಿಯಲ್ಲಿ ತನಿಖೆ ಅಲ್ಲದೇ, ಮುಂದೆ ಯಾವುದೇ ರೀತಿಯ ಅಪರಾಧದಲ್ಲಿ ತೊಡಗಿಸಿಕೊಳ್ಳಲು ತಡೆಯಲು ಕಸ್ಟಡಿಯ ಆಗತ್ಯವಿದೆ ಎಂದು ನ್ಯಾಯಾಲಯ ಹೇಳಿತು.
ಪಾಟಿಯಾಲ ಹೌಸ್ ಕೋರ್ಟ್‌ನಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದಾಗ ನೀಡಿರುವ ಹೇಳಿಕೆ 'ಸಂಪೂರ್ಣ ಸುಳ್ಳು ಎಂದು ಪಿಂಕಿ ಇರಾನಿ ಶನಿವಾರ ಬಹಿರಂಗಪಡಿಸಿದರು. ಆರೋಪಿಯು ತನ್ನ ಎಲ್ಲಾ ಹೇಳಿಕೆಗಳನ್ನು ಹಿಂತೆಗೆದುಕೊಳ್ಳುತ್ತಿರುವುದಾಗಿ ಹೇಳಿದ್ದು ಅದನ್ನು ದಾಖಲೆಯಲ್ಲಿ ಇಡಬೇಕು ಎಂದು ನ್ಯಾಯಾಲಯ ಸೂಚಿಸಿತು.
ಕಂಪನಿಗಳು ಮತ್ತಿತರ ಕಡೆಗಳಿಂದ ಹಣ ಸುಲಿಗೆಗೆ ಪಿಂಕಿ ಇರಾನಿಯನ್ನು ಬಳಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಕಳೆದ ವಾರ ನಟಿ ಜಾಕ್ವೆಲಿನ್ ಪರ್ನಾಂಡಿಸ್ ಅವರ ಹೇಳಿಕೆಯನ್ನು ದೆಹಲಿ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ದಾಖಲಿಸಿದ್ದರು. ಪಿಂಕಿಯನ್ನು ಸಹ ಈ ಹಿಂದೆಯೇ ಬಂಧಿಸಲಾಗಿತ್ತು. ಆದರೆ ಆಕೆ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


