ದಾವೋಸ್‌ನಲ್ಲಿ ನಡೆಯುವ 2023ರ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಯುಪಿ ಸಿಎಂ ಯೋಗಿ ಭಾಗಿ ಸಾಧ್ಯತೆ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಶ್ವ ಆರ್ಥಿಕ ಶೃಂಗಸಭೆ-2023 ರಲ್ಲಿ ಪಾಲ್ಗೊಳ್ಳಲು ಸ್ವಿಟ್ಜರ್ಲೆಂಡ್‌ನ ದಾವೋಸ್‌ಗೆ ನಿಯೋಗ ಕರೆದೊಯ್ಯಲು ಸಿದ್ಧರಾಗಿದ್ದಾರೆ.

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಶ್ವ ಆರ್ಥಿಕ ಶೃಂಗಸಭೆ-2023 ರಲ್ಲಿ ಪಾಲ್ಗೊಳ್ಳಲು ಸ್ವಿಟ್ಜರ್ಲೆಂಡ್‌ನ ದಾವೋಸ್‌ಗೆ ನಿಯೋಗ ಕರೆದೊಯ್ಯಲು ಸಿದ್ಧರಾಗಿದ್ದಾರೆ.
ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಉತ್ತರ ಪ್ರದೇಶ "ಅತ್ಯುತ್ತಮ ಹೂಡಿಕೆ ತಾಣ" ಎಂದು ಪ್ರದರ್ಶಿಸಲು ರಾಜ್ಯ ಸರ್ಕಾರ ಪೆವಿಲಿಯನ್ ಸಿದ್ಧಪಡಿಸುತ್ತಿದೆ.
ವಿಶ್ವ ಆರ್ಥಿಕ ಶೃಂಗ ಸಭೆಯನ್ನು ಮುಂದಿನ ವರ್ಷ ಜನವರಿ 16 ರಿಂದ 20 ರವರೆಗೆ ದಾವೋಸ್‌ನಲ್ಲಿ ನಡೆಸಲು ಉದ್ದೇಶಿಸಲಾಗಿದೆ.
ಮುಂದಿನ ಐದು ವರ್ಷಗಳಲ್ಲಿ ರಾಜ್ಯವನ್ನು ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಗುರಿ ಸಾಧಿಸುವ ನಿಟ್ಟಿನಲ್ಲಿ ಈ ಪ್ರಯತ್ನವು ಯೋಗಿ ಸರ್ಕಾರದ ಮತ್ತೊಂದು ಹೆಜ್ಜೆಯಾಗಿದೆ.
ವಿಶ್ವ ಹಾರ್ಥಿಕ ಶೃಂಗಸಭೆಯಲ್ಲಿ ಭಾಗವಹಿಸುವ ಸಿಎಂ ಯೋಗಿ ಅವರ ಪ್ರಯಾಣದ ಯೋಜನೆಯನ್ನು ಅನುಮೋದಿಸಲಾಗಿದೆ. ಉತ್ತರ ಪ್ರದೇಶವನ್ನು ಸಂಭಾವ್ಯ ಹೂಡಿಕೆಯ ತಾಣವಾಗಿ ಮಾಡಲು ದಾವೋಸ್‌ನಲ್ಲಿ ಪೆವಿಲಿಯನ್ ಹಾಕುವುದು ಸೇರಿದಂತೆ ವಿವಿಧ ಆಯ್ಕೆಗಳ ಮೇಲೆ ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಆದಾಗ್ಯೂ, ಸಿಎಂ ಯೋಗಿ ಅವರ ಭಾಗವಹಿಸುವಿಕೆಯು ಅವರ ರಾಜಕೀಯ ಮತ್ತು ಇತರ ಕಾರ್ಯಕ್ರಮಗಳ ಮೇಲೆ ಹೆಚ್ಚು ಅವಲಂಬಿತವಾಗಿರುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಯೋಗಿ ಆದಿತ್ಯನಾಥ್ ಅವರು ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗವಹಿಸಲು ದಾವೋಸ್‌ಗೆ ಪ್ರಯಾಣಿಸುವ ಮೊದಲ ಉತ್ತರ ಪ್ರದೇಶ ಮುಖ್ಯಮಂತ್ರಿ ಆಗಲಿದ್ದಾರೆ. ಮುಖ್ಯಮಂತ್ರಿಗಳ ಭೇಟಿಗೆ ರಾಜ್ಯ ಸರ್ಕಾರ ಸಿದ್ಧತೆಗಳನ್ನು ಚುರುಕುಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


