ದೇಶ

ಪಶ್ಚಿಮ ಬಂಗಾಳ: ಅಭಿಷೇಕ್ ಬ್ಯಾನರ್ಜಿ ಸಾರ್ವಜನಿಕ ಸಭೆಯ ವೇದಿಕೆ ಬಳಿ ಸ್ಫೋಟ; ಮೂವರು ದುರ್ಮರಣ

ಟಿಎಂಸಿ ಹಿರಿಯ ಮುಖಂಡ ಅಭಿಷೇಕ್ ಬ್ಯಾನರ್ಜಿ ರ್‍ಯಾಲಿಯ ವೇದಿಕೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ: ಅಭಿಷೇಕ್ ಬ್ಯಾನರ್ಜಿ ಸಾರ್ವಜನಿಕ ಸಭೆಯ ವೇದಿಕೆ ಬಳಿ ಸ್ಫೋಟ; ಮೂವರು ದುರ್ಮರಣ
ಸ್ಫೋಟ ಸಂಭವಿಸಿದ ಸ್ಥಳದ ಚಿತ್ರ
Published On :

ಕೊಲ್ಕತ್ತಾ: ಟಿಎಂಸಿ ಹಿರಿಯ ಮುಖಂಡ ಅಭಿಷೇಕ್ ಬ್ಯಾನರ್ಜಿ ರ್‍ಯಾಲಿಯ ವೇದಿಕೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಕೊಂಟೈ ಪಟ್ಟಣದಿಂದ ಕೇವಲ 1.5 ಕಿಮೀ ದೂರದಲ್ಲಿರುವ ಭೂಪತಿನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಅಭಿಷೇಕ್ ಬ್ಯಾನರ್ಜಿ ಅವರ ಸಾರ್ವಜನಿಕ ಸಭೆಯೊಂದನ್ನು ಆಯೋಜಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ 11-15ರ ಸುಮಾರಿನಲ್ಲಿ ಸ್ಫೋಟ ಸಂಭವಿಸಿದ್ದು, ಇಂದು ಬೆಳಗ್ಗೆ ಮೂವರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಇತರ ಕೆಲವು ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಸ್ಫೋಟದ ಕಾರಣ ಇನ್ನೂ ತಿಳಿದುಬಂದಿಲ್ಲ, ಹೆಚ್ಚಿನ ತನಿಖೆ ನಡೆಯುತ್ತಿದೆ ಆದರೆ ಪರಿಣಾಮವು ಎಷ್ಟು ಪ್ರಬಲವಾಗಿದೆಯೆಂದರೆ ಘಟನೆಯಲ್ಲಿ ಹುಲ್ಲಿನ ಮನೆಯ ಛಾವಣಿಯೊಂದು ಹಾರಿ ಹೋಗಿದೆ ಎಂದು ಕಂಟೈನ್ ಉಪವಿಭಾಗದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ವಿಧಿವಿಜ್ಞಾನ ತಂಡ ಮಾದರಿಗಳನ್ನು ಸಂಗ್ರಹಿಸಲು ಸ್ಥಳಕ್ಕೆ ತಲುಪಿದೆ. ಈ ಘಟನೆಗೆ ಟಿಎಂಸಿಯೇ ಹೊಣೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಆರೋಪಿಸಿದ್ದಾರೆ. ಇಂತಹ ಘಟನೆಗಳ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಏಕೆ ಮೌನವಾಗಿದ್ದಾರೆ ಎಂದು ಭಾರತೀಯ ಕಮ್ಯುನಿಸ್ಟ್ ಪಾರ್ಟಿ-ಮಾರ್ಕ್ಸ್‌ವಾದಿ ಹಿರಿಯ ನಾಯಕ ಸುಜನ್ ಚಕ್ರವರ್ತಿ ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.