ಗುಜರಾತ್ ವಿಧಾನಸಭಾ ಚುನಾವಣೆ: ನಾಳೆ 2ನೇ ಹಂತದ ಮತದಾನ, ಸಕಲ ಸಿದ್ಧತೆ
ಗುಜರಾತ್ ವಿಧಾನಸಭೆಯ 93 ಸ್ಥಾನಗಳಿಗೆ ನಾಳೆ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಮುಕ್ತ ಹಾಗೂ ಸುಗಮ ಮತದಾನಕ್ಕೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ.

ಅಹಮದಾಬಾದ್: ಗುಜರಾತ್ ವಿಧಾನಸಭೆಯ 93 ಸ್ಥಾನಗಳಿಗೆ ನಾಳೆ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಮುಕ್ತ ಹಾಗೂ ಸುಗಮ ಮತದಾನಕ್ಕೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಅಹಮದಾಬಾದ್, ವಡೋದರಾ, ಗಾಂಧಿನಗರ ಮತ್ತಿತರ ಜಿಲ್ಲೆಗಳಲ್ಲಿ ಮತದಾನ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಸೇರಿದಂತೆ 61 ಪಕ್ಷಗಳ 833 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.
ಬಿಜೆಪಿ, ಕೇಜ್ರಿವಾಲ್ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಕಾಂಗ್ರೆಸ್ 90 ಕ್ಷೇತ್ರಗಳಲ್ಲಿ, ಎನ್ ಸಿಪಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಉಳಿದಂತೆ ಬಿಟಿಪಿ 12, ಬಿಎಸ್ ಪಿ 44 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಹಾರ್ದಿಕ್ ಪಟೇಲ್, ಅಲ್ಫೇಶ್ ಠಾಕೂರ್, ಜಿಗ್ನೇಶ್ ಮೆವಾನಿ ಸೇರಿದಂತೆ ಹಲವು ಮಂದಿ ಚುನಾವಣಾ ಕಣದಲ್ಲಿದ್ದು, ನಾಳೆ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.
ಈ ಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದು, ಡಿಸೆಂಬರ್ 1 ಮತ್ತು 2 ರಂದು ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ನಡೆಸಿದ್ದು, ತನ್ನ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದ್ದಾರೆ. ಎರಡನೇ ಹಂತದ ಚುನಾವಣೆಯಲ್ಲಿ 1.29 ಕೋಟಿ ಪುರುಷರು 1.22 ಕೋಟಿ ಮಹಿಳಾ ಮತದಾರರು ಸೇರಿದಂತೆ ಒಟ್ಟಾರೇ 2.51 ಕೋಟಿ ಮತದಾರರು ತಮ್ಮ ಮತ ಚಲಾಯಿಸಲು ಅರ್ಹರಾಗಿದ್ದಾರೆ.
ಸುಗಮ ಮತದಾನಕ್ಕಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, 14,975 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 1.13 ಲಕ್ಷ ಚುನಾವಣಾ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಆಯೋಗ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


