ಕೋಲ್ಕತ್ತಾ: ನ್ಯೂ ಟೌನ್‌ನಲ್ಲಿ ಭಾರಿ ಬೆಂಕಿ ಅವಘಡ; ರಸ್ತೆ ಬದಿಯ 20 ಅಂಗಡಿಗಳು ಸುಟ್ಟು ಕರಕಲು
ಮಂಗಳವಾರ ಬೆಳಗ್ಗೆ ಕೋಲ್ಕತ್ತಾ ಸಮೀಪದ ನ್ಯೂ ಟೌನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ರಸ್ತೆ ಬದಿಯಲ್ಲಿದ್ದ 20 ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋಲ್ಕತ್ತಾ: ಮಂಗಳವಾರ ಬೆಳಗ್ಗೆ ಕೋಲ್ಕತ್ತಾ ಸಮೀಪದ ನ್ಯೂ ಟೌನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ರಸ್ತೆ ಬದಿಯಲ್ಲಿದ್ದ 20 ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗೌರಂಗಾನಗರದ ಧಲೈ ಸೇತುವೆ ಬಳಿಯ ಬಾಗ್ಜೋಳ ಕಾಲುವೆಯ ಉದ್ದಕ್ಕೂ ಇರುವ ಅಂಗಡಿಗಳ ಪೈಕಿ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡಿರುವುದನ್ನು ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಸ್ಥಳೀಯರು ಗಮನಿಸಿದ್ದಾರೆ ಎಂದು ಅವರು ಹೇಳಿದರು.
ನೋಡ ನೋಡುತ್ತಲೇ ಬೆಂಕಿಯು ಇತರೆ ಅಂಗಡಿಗಳಿಗೂ ಆವರಿಸಿದೆ. ಘಟನೆಯಿಂದಾಗಿ ಅಕ್ಕಪಕ್ಕದ ಕನಿಷ್ಠ 20 ಅಂಗಡಿಗಳು ಸುಟ್ಟುಹೋಗಿವೆ ಎಂದು ಅವರು ಹೇಳಿದರು.
ಬಳಿಕ ಸ್ಥಳಕ್ಕೆ ಆಗಮಿಸಿದ ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ಹತೋಟಿಗೆ ತಂದವು. ಬೆಂಕಿ ಹೊತ್ತುಕೊಂಡಿರುವ ಕಾರಣ ಏನೆಂದು ತನಿಖೆ ನಡೆಸಲಾಗುತ್ತಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


