ಗುಜರಾತ್‌ನಲ್ಲಿ ಎಕ್ಸಿಟ್ ಪೋಲ್ ಭವಿಷ್ಯ ಸುಳ್ಳಾಗಬಹುದು: ಪಂಜಾಬ್ ಸಿಎಂ ಮಾನ್
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ, ಗುಜರಾತ್‌ನಲ್ಲಿ ತಮ್ಮ ಪಕ್ಷದ ಸೋಲಿನ ಭವಿಷ್ಯ ನುಡಿದ ಚುನಾವಣೋತ್ತರ ಸಮೀಕ್ಷೆ ತಪ್ಪಾಗಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್...

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ, ಗುಜರಾತ್‌ನಲ್ಲಿ ತಮ್ಮ ಪಕ್ಷದ ಸೋಲಿನ ಭವಿಷ್ಯ ನುಡಿದ ಚುನಾವಣೋತ್ತರ ಸಮೀಕ್ಷೆ ತಪ್ಪಾಗಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಬುಧವಾರ ಹೇಳಿದ್ದಾರೆ.
ಗುಜರಾತಿನಲ್ಲಿ ಆಮ್ ಆದ್ಮಿ ಪಕ್ಷ ತನ್ನ ಎಲ್ಲ ಪ್ರಯತ್ನಗಳನ್ನು ಮಾಡಿದ್ದು, ಅಲ್ಲಿ ಎಕ್ಸಿಟ್ ಪೋಲ್ ಭವಿಷ್ಯ ಸುಳ್ಳಾಗಬಹುದು ಮತ್ತು ಮತದಾರ ಅಚ್ಚರಿಯ ಫಲಿತಾಂಶ ನೀಡಬಹುದು ಎಂದು ಮಾನ್ ತಿಳಿಸಿದ್ದಾರೆ.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಭರ್ಜರಿ ಗೆಲುವು ಸಾಧಿಸಿರುವ ಎಎಪಿ ಮೊದಲ ಬಾರಿಗೆ ಅಧಿಕಾರದ ಗದ್ದಗೆ ಏರಲಿದೆ.
ಆದರೆ, ಎಕ್ಸಿಟ್ ಪೋಲ್ ಪ್ರಕಾರ ಗುಜರಾತ್ ಮತ್ತು ಹಿಮಾಚಲ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸೋಲನುಭವಿಸಲಿದ್ದು, ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಈ ರಾಜ್ಯಗಳ ಫಲಿತಾಂಶ ನಾಳೆ ಪ್ರಕಟವಾಗಲಿದೆ.
ರಾಷ್ಟ್ರ ರಾಜಧಾನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ, "ಟ್ರೆಂಡ್‌ಗಳು ಈಗ ಫಲಿತಾಂಶಗಳಾಗಿ ಬದಲಾಗುತ್ತಿವೆ. ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್‌ನ 15 ವರ್ಷಗಳ ಸುದೀರ್ಘ ಆಡಳಿತವನ್ನು ಕಿತ್ತುಹಾಕಿದರು ಮತ್ತು ಈಗ ಎಂಸಿಡಿಯಲ್ಲಿ ಬಿಜೆಪಿಯ 15 ವರ್ಷಗಳ ಸುದೀರ್ಘ ಆಡಳಿತವನ್ನು ಕಿತ್ತುಹಾಕಿದ್ದಾರೆ" ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


