ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ: ಮುಖ್ಯಮಂತ್ರಿ ಸ್ಥಾನಕ್ಕೆ ಜೈರಾಮ್ ಠಾಕೂರ್ ರಾಜೀನಾಮೆ
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವಿನತ್ತ ಮುನ್ನುಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಜೈರಾಮ್ ಠಾಕೂರ್ ಗುರುವಾರ ಹೇಳಿದ್ದಾರೆ.

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವಿನತ್ತ ಮುನ್ನುಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಜೈರಾಮ್ ಠಾಕೂರ್ ಗುರುವಾರ ಹೇಳಿದ್ದಾರೆ.
ಜನಾದೇಶವನ್ನು ಗೌರವಿಸುತ್ತೇನೆ. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ವರಿಷ್ಠರಿಗೆ ಧನ್ಯವಾದ ಸಲ್ಲಿಸಲು ಬಯಸುತ್ತೇನೆ. ರಾಜಕೀಯ ಬದಿಗೊತ್ತಿ ರಾಜ್ಯದ ಅಭಿವೃದ್ಧಿಗೆ ಬದ್ಧನಾಗಿರುವುದಾಗಿ ಅವರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನದವರೆಗಿನ ಚುನಾವಣಾ ಆಯೋಗದ ಮಾಹಿತಿ ಪ್ರಕಾರ, 68 ಸ್ಥಾನಗಳ ಪೈಕಿ 32 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 13ರಲ್ಲಿ, ಕಾಂಗ್ರೆಸ್ 16, ಮತ್ತಿತರರು ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಇತರ 23 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಬಿಜೆಪಿ 13 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಈ ಮಧ್ಯೆ ಚುನಾವಣಾ ಫಲಿತಾಂಶ ಘೋಷಣೆ ನಂತರ ಕಾಂಗ್ರೆಸ್ ನೂತನ ಶಾಸಕರ ಸಭೆ ನಡೆಸಲಿದ್ದು, ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


