ದೇಶ

ಯುಪಿ ಉಪ ಚುನಾವಣೆ: ಅಜಂ ಖಾನ್ ಭದ್ರಕೋಟೆ ರಾಂಪುರದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು

ಉತ್ತರ ಪ್ರದೇಶದ ರಾಂಪುರ ಸದರ್ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರ ಭದ್ರಕೋಟೆ ಬೇಧಿಸಿದ ಆಡಳಿತರೂಢ ಬಿಜೆಪಿ ಮೊದಲ ಬಾರಿ ಗೆಲುವು ಸಾಧಿಸಿದೆ.

ಯುಪಿ ಉಪ ಚುನಾವಣೆ: ಅಜಂ ಖಾನ್ ಭದ್ರಕೋಟೆ ರಾಂಪುರದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು
ಯೋಗಿ ಆದಿತ್ಯನಾಥ್
Published On :

ರಾಂಪುರ: ಉತ್ತರ ಪ್ರದೇಶದ ರಾಂಪುರ ಸದರ್ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರ ಭದ್ರಕೋಟೆ ಬೇಧಿಸಿದ ಆಡಳಿತರೂಢ ಬಿಜೆಪಿ ಮೊದಲ ಬಾರಿ ಗೆಲುವು ಸಾಧಿಸಿದೆ. 

ಬಿಜೆಪಿ ಅಭ್ಯರ್ಥಿ ಆಕಾಶ್ ಸಕ್ಸೇನಾ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಅಸಿಮ್ ರಾಜಾ ವಿರುದ್ಧ ಗೆಲುವು ಸಾಧಿಸಿದ್ದಾರೆ.

33,702 ಮತಗಳ ಅಂತರದಿಂದ ಗೆದ್ದಿರುವ ಆಕಾಶ್ ಸಕ್ಸೇನಾ ಅವರಿಗೆ ಚುನಾವಣಾಧಿಕಾರಿಗಳು ಗೆಲುವಿನ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದ್ದಾರೆ.

ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಅಜಂ ಖಾನ್ ಅವರನ್ನು ಶಾಸಕ ಸ್ಥಾನದಿಂದ  ಅನರ್ಹಗೊಳಿಸಿದ ನಂತರ ತೆರವಾದ ಸ್ಥಾನಕ್ಕೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.