ಗುಜರಾತ್ ಚುನಾವಣೆ ಫಲಿತಾಂಶ: ರವೀಂದ್ರ ಜಡೇಜಾ ಪತ್ನಿ ರಿವಾಬ ಮುನ್ನಡೆ
ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಆರಂಭಿಕ ಹಂತದಲ್ಲಿ ಹಿನ್ನೆಡೆಯಲ್ಲಿದ್ದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಇದೀಗ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಆರಂಭಿಕ ಹಂತದಲ್ಲಿ ಹಿನ್ನೆಡೆಯಲ್ಲಿದ್ದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಇದೀಗ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬೆಳಗ್ಗೆ 10-30ವರೆಗಿನ ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ರಿವಾಬ ತನ್ನ ಸಮೀಪದ ಅಭ್ಯರ್ಥಿಗಿಂತ 14,905 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇವರ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದಿಂದ ಬಿಪೇಂದ್ರ ಸಿನ್ಹಾ ಜಡೇಜಾ ಮತ್ತು ಎಎಪಿಯಿಂದ ಅಹಿರ್ ಕರ್ಶನ್ಭಾಯ್ ಪರ್ಬತ್ಭಾಯ್ ಕರ್ಮೂರ್ ಕಣದಲ್ಲಿದ್ದಾರೆ.
ಎಎಪಿ ಅಭ್ಯರ್ಥಿ 7,235 ಮತಗಳಿಂದ ಎರಡನೇ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ಅಭ್ಯರ್ಥಿ 5,288 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಹೊಸ ಮಾಹಿತಿ ಪ್ರಕಾರ 182 ಸ್ಥಾನಗಳ ಪೈಕಿ ಬಿಜೆಪಿ 148 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


