ದೇಶ

ಗುಜರಾತ್ ಜನಾದೇಶವನ್ನು ನಮ್ರತೆಯಿಂದ ಒಪ್ಪಿಕೊಳ್ಳುತ್ತೇವೆ: ರಾಹುಲ್ ಗಾಂಧಿ

ಗುಜರಾತಿನಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜನಾದೇಶವನ್ನು ನಮ್ರತೆಯಿಂದ ಒಪ್ಪಿಕೊಳ್ಳುವುದಾಗಿ ಗುರುವಾರ ಹೇಳಿದ್ದಾರೆ.

ಗುಜರಾತ್ ಜನಾದೇಶವನ್ನು ನಮ್ರತೆಯಿಂದ ಒಪ್ಪಿಕೊಳ್ಳುತ್ತೇವೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :

ನವದೆಹಲಿ: ಗುಜರಾತಿನಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜನಾದೇಶವನ್ನು ನಮ್ರತೆಯಿಂದ ಒಪ್ಪಿಕೊಳ್ಳುದಾಗಿ ಗುರುವಾರ ಹೇಳಿದ್ದಾರೆ.

ಗುಜರಾತ್ ಜನಾದೇಶವನ್ನು ಒಪ್ಪಿಕೊಳ್ಳುತ್ತೇನೆ ಮತ್ತು ಅವರ ಹಕ್ಕುಗಳಿಗಾಗಿ, ದೇಶದ ಆದರ್ಶಗಳಿಗಾಗಿ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ತಿಳಿಸಿದ್ದಾರೆ.

"ನಾವು ಗುಜರಾತಿನ ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ. ನಾವು ಪಕ್ಷವನ್ನು ಮರುಸಂಘಟನೆ ಮಾಡುತ್ತೇವೆ ಮತ್ತು ದೇಶದ ಆದರ್ಶಗಳು ಮತ್ತು ರಾಜ್ಯದ ಜನರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ" ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಗುಜರಾತ್‌ನಲ್ಲಿ ಕಳೆದ 2017ರ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತರೂಢ ಬಿಜೆಪಿಗೆ ಕಠಿಣ ಸ್ಪರ್ಧೆ ನೀಡಿದ್ದ ಕಾಂಗ್ರೆಸ್ ಈ ಬಾರಿ ಕೇವಲ 17 ಸ್ಥಾನಗಳಿದೆ ತೃಪ್ತಿ ಪಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.