ಕೊಲಿಜಿಯಂ ಬಹು ಸದಸ್ಯ ಸಂಸ್ಥೆಯಾಗಿದ್ದು, ಅದರ ತಾತ್ಕಾಲಿಕ ನಿರ್ಧಾರವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಮಾಹಿತಿ ಹಕ್ಕು ಕಾಯ್ದೆಯಡಿ 2018ರ ಡಿಸೆಂಬರ್ 12ರಂದು ನಡೆದ ಕೊಲಿಜಿಯಂ ಸಭೆಯ ವಿವರಗಳನ್ನು ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನವದೆಹಲಿ: ಮಾಹಿತಿ ಹಕ್ಕು ಕಾಯ್ದೆಯಡಿ 2018ರ ಡಿಸೆಂಬರ್ 12ರಂದು ನಡೆದ ಕೊಲಿಜಿಯಂ ಸಭೆಯ ವಿವರಗಳನ್ನು ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಸಿ ಟಿ ರವಿಕುಮಾರ್ ನೇತೃತ್ವದ ನ್ಯಾಯಪೀಠ, ಎಲ್ಲಾ ಕೊಲಿಜಿಯಂ ಸದಸ್ಯರು ತೆಗೆದುಕೊಂಡ ಮತ್ತು ಸಹಿ ಮಾಡಿದ ನಿರ್ಣಯಗಳನ್ನು ಮಾತ್ರ ಅಂತಿಮ ನಿರ್ಧಾರ ಎಂದು ಹೇಳಬಹುದು ಎಂದು ಹೇಳಿದೆ.
ಸದಸ್ಯರ ನಡುವೆ ಚರ್ಚೆ ಮತ್ತು ಸಮಾಲೋಚನೆಯ ಮೇಲೆ ತೆಗೆದುಕೊಂಡ ತಾತ್ಕಾಲಿಕ ನಿರ್ಣಯಗಳು ಅವರೆಲ್ಲರೂ ಸಹಿ ಮಾಡದ ಹೊರತು ಅಂತಿಮವೆಂದು ಹೇಳಲಾಗುವುದಿಲ್ಲ. ಕೊಲಿಜಿಯಂ ಬಹು-ಸದಸ್ಯ ಸಂಸ್ಥೆಯಾಗಿದ್ದು, ಅದರ ತಾತ್ಕಾಲಿಕ ನಿರ್ಧಾರವನ್ನು ಸಾರ್ವಜನಿಕ ವೇದಿಕೆಯಲ್ಲಿ ತರಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಮಾಧ್ಯಮ ವರದಿಗಳು ಮತ್ತು ಕೊಲಿಜಿಯಂನ ಮಾಜಿ ಸದಸ್ಯರ ಸಂದರ್ಶನದ ಮೇಲೆ ಅವಲಂಬಿತರಾಗಲು ಸಾಧ್ಯವಿಲ್ಲ. ಮಾಜಿ ನ್ಯಾಯಾಧೀಶರು ನೀಡಿದ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
2019 ರ ಜನವರಿ 10ರಂದು ಅಂಗೀಕರಿಸಿದ ನಿರ್ಣಯದಲ್ಲಿ, ನ್ಯಾಯಮೂರ್ತಿ ಎಂ.ಬಿ.ಲೋಕೂರ್ ಅವರ ನಿವೃತ್ತಿಯಿಂದಾಗಿ ಸಂಯೋಜನೆಯನ್ನು ಬದಲಾಯಿಸಿದ ಕೊಲಿಜಿಯಂ, ಡಿಸೆಂಬರ್ 12, 2018 ರಂದು ತನ್ನ ಸಭೆಯಲ್ಲಿ ಕೆಲವು ಹೆಸರುಗಳ ಬಗ್ಗೆ ಸಮಾಲೋಚನೆಗಳನ್ನು ನಡೆಸಿತ್ತು. ಆದರೆ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿರಲಿಲ್ಲ ಎಂದು ಉಲ್ಲೇಖಿಸಿದೆ.
2018 ರ ಡಿಸೆಂಬರ್ 12 ರಂದು ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯ ಕಾರ್ಯಸೂಚಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಸಲ್ಲಿಸಿದ ಅರ್ಜಿಯ ಮೇಲೆ ಸುಪ್ರೀಂ ಕೋರ್ಟ್ ಇಂದು ಈ ತೀರ್ಪು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


