ದೇಶ

ತೆಲಂಗಾಣ: ಹಾಡಹಗಲೇ ಮನೆಗೆ ನುಗ್ಗಿ, ಯುವತಿ ಅಪಹರಿಸಿದ ಗ್ಯಾಂಗ್- ವಿಡಿಯೋ

ಹಾಡಹಗಲೇ ಮನೆಯೊಂದಕ್ಕೆ ನುಗ್ಗಿದ ಪುಂಡರ ಗುಂಪೊಂದು ಪೋಷಕರ ಮೇಲೆ ಹಲ್ಲೆ ನಡೆಸಿ, 24 ವರ್ಷದ ಯುವತಿಯನ್ನು ಅಪಹರಿಸಿದ ಘಟನೆ ತೆಲಂಗಾಣದ ರಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಪುಂಡರ ಪುಂಡಾಟದ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.

ತೆಲಂಗಾಣ: ಹಾಡಹಗಲೇ ಮನೆಗೆ ನುಗ್ಗಿ, ಯುವತಿ ಅಪಹರಿಸಿದ ಗ್ಯಾಂಗ್- ವಿಡಿಯೋ
ಯುವತಿ ಸಂಬಂಧಿಕರ ಮೇಲೆ ಹಲ್ಲೆ ನಡೆಸುತ್ತಿರುವ ಪುಂಡರ ಚಿತ್ರ
Published On :

ತೆಲಂಗಾಣ: ಹಾಡಹಗಲೇ ಮನೆಯೊಂದಕ್ಕೆ ನುಗ್ಗಿದ ಪುಂಡರ ಗುಂಪೊಂದು ಪೋಷಕರ ಮೇಲೆ ಹಲ್ಲೆ ನಡೆಸಿ, 24 ವರ್ಷದ ಯುವತಿಯನ್ನು ಅಪಹರಿಸಿದ ಘಟನೆ ತೆಲಂಗಾಣದ ರಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಪುಂಡರ ಪುಂಡಾಟದ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.

ಅಡಿಬಾಟ್ಲಾ ಗ್ರಾಮದ ಮನೆಗೆ ನುಗ್ಗಿದ 100 ಯುವಕರು ಮನೆಯನ್ನು ಧ್ವಂಸಗೊಳಿಸಿ, ಯುವತಿ ವೈಶಾಲಿಯನ್ನು ಬಲವಂತವಾಗಿ ಕರೆದೊಯ್ದಿದ್ದಿದ್ದಾರೆ. ಯುವತಿ  ಸಂಬಂಧಿಕರೊಬ್ಬರಿಗೆ ಯುವಕನೊಬ್ಬ ಹಲ್ಲೆ ನಡೆಸುತ್ತಿರುವ ದೃಶ್ಯಾವಳಿಗಳು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತೋರ್ವ ಕಾರಿನ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾನೆ. ಈ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಅಪಹರಣ ಕೇಸ್ ದಾಖಲಾಗಿದ್ದು, ಯುವತಿಯನ್ನು ರಕ್ಷಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಕಮೀಷನರ್ ಸುಧೀರ್ ಬಾಬು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.