ದೇಶ

ಈ ಬಾರಿಯ ಮೋದಿ- ಪುಟಿನ್ ವಾರ್ಷಿಕ ಶೃಂಗಸಭೆ ರದ್ದು?

ದಿನಾಂಕ ನಿಗದಿಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಈ ವರ್ಷ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಬೇಕಾಗಿದ್ದ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆ ಈ ಬಾರಿ ನಡೆಯುವ ಸಾಧ್ಯತೆಯಿಲ್ಲ ಎಂದು ಮೂಲಗಳು ಹೇಳಿವೆ.

ಈ ಬಾರಿಯ ಮೋದಿ- ಪುಟಿನ್ ವಾರ್ಷಿಕ ಶೃಂಗಸಭೆ ರದ್ದು?
ಮೋದಿ- ಪುಟಿನ್
Published On :

ನವದೆಹಲಿ: ದಿನಾಂಕ ನಿಗದಿಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಈ ವರ್ಷ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಬೇಕಾಗಿದ್ದ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆ ಈ ಬಾರಿ ನಡೆಯುವ ಸಾಧ್ಯತೆಯಿಲ್ಲ ಎಂದು ಮೂಲಗಳು ಹೇಳಿವೆ.

ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಪುಟಿನ್ ಅವರನ್ನು ಭೇಟಿಯಾಗುತ್ತಲ್ಲ, ದಿನಾಂಕ ಸಮಸ್ಯೆಯಿಂದಾಗಿ ಸಭೆ ನಡೆಯುತ್ತಿಲ್ಲ ಎಂದು ಮೂಲಗಳು ತಿಳಿಸಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಭಾರತದ ಪ್ರಧಾನ ಮಂತ್ರಿ ಮತ್ತು ರಷ್ಯಾ ಅಧ್ಯಕ್ಷರ ನಡುವಣದ ವಾರ್ಷಿಕ ಶೃಂಗಸಭೆ ಉಭಯ ದೇಶಗಳ ನಡುವಣ ದ್ವಿಪಕ್ಷೀಯ ಬಾಂಧವ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಉಕ್ರೇನ್ ಯುದ್ಧದಲ್ಲಿ ಪರಮಾಣು ಅಸ್ತ್ರ ಬಳಸುವುದಾಗಿ ರಷ್ಯಾ ಅಧ್ಯಕ್ಷರು ಬೆದರಿಕೆ ಹಾಕಿರುವುದರಿಂದ ಈ ಬಾರಿ ಉಭಯ ನಾಯಕರ ಭೇಟಿ ರದ್ದಾಗುವ ಸಾಧ್ಯತೆಯಿರುವುದಾಗಿ ಅನೇಕ ಮಾಧ್ಯಮಗಳು ವರದಿ ಮಾಡಿವೆ. 2000ರಿಂದಲೂ ಭಾರತ- ರಷ್ಯಾ ನಡುವಣ ವಾರ್ಷಿಕ ಶೃಂಗಸಭೆಯ ಸಂಪ್ರದಾಯ ನಡೆಯುತ್ತಾ ಬಂದಿದೆ.

ಕಳೆದ ವರ್ಷ ನವದೆಹಲಿಯ ಹೈದ್ರಾಬಾದ್ ಹೌಸ್ ನಲ್ಲಿ ನಡೆದ ಶೃಂಗಸಭೆಯಲ್ಲಿ ಪುಟಿನ್ ಪಾಲ್ಗೊಂಡಿದ್ದರು. ಈ ವರ್ಷ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಮಾಸ್ಕೋಗೆ ತೆರಳಬೇಕಿತ್ತು. ಆದರೆ, ಮೋದಿ ಈ ಬಾರಿ ರಷ್ಯಾಗೆ ತೆರಳುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.