ಎಂಸಿಡಿ ಚುನಾವಣೆ ಸೋಲು: ದೆಹಲಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಆದೇಶ್ ಗುಪ್ತಾ ರಾಜೀನಾಮೆ
ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹೊಣೆಹೊತ್ತು ದೆಹಲಿ ಅಧ್ಯಕ್ಷ ಸ್ಥಾನಕ್ಕೆ ಆದೇಶ್ ಗುಪ್ತಾ ಅವರು ರಾಜೀನಾಮೆ ನೀಡಿದ್ದಾರೆ.

ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹೊಣೆಹೊತ್ತು ದೆಹಲಿ ಅಧ್ಯಕ್ಷ ಸ್ಥಾನಕ್ಕೆ ಆದೇಶ್ ಗುಪ್ತಾ ಅವರು ರಾಜೀನಾಮೆ ನೀಡಿದ್ದಾರೆ.
ಮಾಹಿತಿ ಪ್ರಕಾರ ಆದೇಶ್ ಗುಪ್ತಾ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದು ಜೆಪಿ ನಡ್ಡಾ ಅವರು ರಾಜಿನಾಮೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮಾಹಿತಿ ಪ್ರಕಾರ ಆದೇಶ್ ಗುಪ್ತಾ ರಾಜೀನಾಮೆ ನೀಡಿದ ನಂತರ ಘಟಕದ ಉಪಾಧ್ಯಕ್ಷ ವೀರೇಂದ್ರ ಸಚ್‌ದೇವ ಅವರನ್ನು ನೇಮಕ ಮಾಡಲಾಗಿದ್ದು ಮುಂದಿನ ಅಧ್ಯಕ್ಷರ ನೇಮಕದವರೆಗೆ ಸಚ್‌ದೇವ ಅಧಿಕಾರದಲ್ಲಿ ಇರುತ್ತಾರೆ.
ಎಂಸಿಡಿ ಚುನಾವಣೆಯಲ್ಲಿ 250 ವಾರ್ಡ್‌ಗಳಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದುಕೊಂಡಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ 134 ಸ್ಥಾನಗಳನ್ನು ಗೆದ್ದುಕೊಂಡಿದೆ. ಎಂಸಿಡಿ ಚುನಾವಣೆಯಲ್ಲಿ, ಆದೇಶ್ ಗುಪ್ತಾ ನೆಲೆಸಿರುವ ಸ್ಥಾನವನ್ನು ಸಹ ಬಿಜೆಪಿ ಗೆಲ್ಲಲು ಸಾಧ್ಯವಾಗಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


