ಅರುಣಾಚಲ ಪ್ರದೇಶ: ಎಲ್ಎಸಿಯಲ್ಲಿ ಮತ್ತೆ ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷ, ಹಲವು ಯೋಧರಿಗೆ ಗಾಯ
ಇಂಡೋ-ಚೀನಾ ಗಡಿಯಲ್ಲಿ ಮತ್ತೆ ಸಂಘರ್ಷ ಏರ್ಪಟ್ಟಿದ್ದು, ಉಭಯ ದೇಶಗಳ ನಡುವಿನ ಸೈನಿಕರು ಸಂಘರ್ಷಕ್ಕಿಳಿದ ಪರಿಣಾಮ ಉಭಯ ದೇಶಗಳ ಹಲವು ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಇಂಡೋ-ಚೀನಾ ಗಡಿಯಲ್ಲಿ ಮತ್ತೆ ಸಂಘರ್ಷ ಏರ್ಪಟ್ಟಿದ್ದು, ಉಭಯ ದೇಶಗಳ ನಡುವಿನ ಸೈನಿಕರು ಸಂಘರ್ಷಕ್ಕಿಳಿದ ಪರಿಣಾಮ ಉಭಯ ದೇಶಗಳ ಹಲವು ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸೇನಾ ಮೂಲಗಳ ಪ್ರಕಾರ ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನ ವಾಸ್ತವ ಗಡಿ ರೇಖೆ (LAC) ಬಳಿ ಬಂದಿದ್ದ ಚೀನಾದ ಸೈನಿಕರಿಗೆ ಭಾರತೀಯ ಯೋಧರು ಪ್ರತಿರೋಧ ತೋರಿದ್ದು, ಈ ವೇಳೆ ಎರಡೂ ಕಡೆಯವರ ನಡುವೆ ಸಂಘರ್ಷ ಏರ್ಪಟ್ಟು ಪರಸ್ಪರ ಕೈಕೈ ಮಿಲಾಯಿಸಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 9ರಂದು ಈ ಕಾದಾಟ ನಡೆದಿದ್ದು, ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ. ಘರ್ಷಣೆಯಲ್ಲಿ ಉಭಯ ದೇಶಗಳ ಹಲವು ಯೋಧರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಘಟನೆಯಲ್ಲಿ ಎರಡೂ ಕಡೆಯ ಸೈನಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಘರ್ಷಣೆಯ ನಂತರ ಭಾರತ ಮತ್ತು ಚೀನಾದ ಪೀಪಲ್ ಲಿಬರೇಷನ್ ಆರ್ಮಿಯ ಸೈನಿಕರೂ ಸ್ಥಳದಿಂದ ನಿರ್ಗಮಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಸೋಮವಾರ ವರದಿ ಮಾಡಿದೆ.
ಘಟನೆಯ ಹಿನ್ನೆಲೆಯಲ್ಲಿ ತವಾಂಗ್‌ನ ಭಾರತದ ಸೇನಾ ಕಮಾಂಡರ್ ಚೀನಾದ ಸೇನಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಸಂಘರ್ಷ ನಡೆದ ಪ್ರದೇಶದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ರಚನಾತ್ಮಕ ಕಾರ್ಯವಿಧಾನಗಳನ್ನು ಅನುಸರಿಸಿದ್ದಾರೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನ ವಾಸ್ತವ ಗಡಿ ರೇಖೆಯುದ್ಧಕ್ಕೂ ಕೆಲವು ವಿವಾದಿತ ಪ್ರದೇಶಗಳಿವೆ. ಎರಡೂ ಕಡೆಯವರು ತಮ್ಮ ನಿಯಂತ್ರಣದಲ್ಲಿರುವ ಪ್ರದೇಶಗಳ ಅಂಚಿನ ವರೆಗೆ ಗಸ್ತು ತಿರುಗುತ್ತಾರೆ. 2006ರಿಂದ ಈ ಪ್ರವೃತ್ತಿ ನಡೆಯುತ್ತಲೇ ಬಂದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


