ಪಿಕ್ನಿಕ್ ಮುಗಿಸಿ ವಾಪಸಾಗುತ್ತಿದ್ದ ಶಾಲಾ ಬಸ್ ಪಲ್ಟಿ: ಇಬ್ಬರು ವಿದ್ಯಾರ್ಥಿಗಳ ಸಾವು, 47 ಮಂದಿಗೆ ಗಾಯ
ಪಿಕ್ನಿಕ್ ಮುಗಿಸಿ ಮರಳುತ್ತಿದ್ದ ಶಾಲಾ ಬಸ್ವೊಂದು ಅಪಘಾತಕ್ಕೀಡಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 47 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸಂಭವಿಸಿದೆ.

ಮುಂಬಯಿ: ಪಿಕ್ನಿಕ್ ಮುಗಿಸಿ ಮರಳುತ್ತಿದ್ದ ಶಾಲಾ ಬಸ್ವೊಂದು ಅಪಘಾತಕ್ಕೀಡಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 47 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸಂಭವಿಸಿದೆ. ಇಲ್ಲಿನ ಲೊಮವಲಾಗೆ ಪಿಕ್‌ನಿಕ್‌ಗೆ ತೆರಳಿದ್ದ ವಿದ್ಯಾರ್ಥಿಗಳಿದ್ದ ಬಸ್ ಖೋಪೊಲಿ ಹಿಲ್ ಸ್ಟೇಷನ್ನಲ್ಲಿ ಅಪಘಾತಕ್ಕೆ ಒಳಗಾಗಿದೆ.
ಪಿಕ್‌ನಿಕ್ ಮುಗಿಸಿಕೊಂಡು ಲೋನವಾಲದಿಂದ ಹಿಂದಿರುಗುವಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬ್ರೇಕ್ ಫೇಲ್ ಆಗಿದ್ದರಿಂದ ಬಸ್ ನಿಯಂತ್ರಣಕ್ಕೆ ಸಿಗಲಿಲ್ಲ ಎಂದು ಡ್ರೈವರ್ ತಿಳಿಸಿದ್ದಾರೆ.
ಲೋನವಾಲ ಗಿರಿಧಾಮದಿಂದ 14 ಕಿ.ಮೀ ದೂರದ ಹಳೆ ಮುಂಬೈ–ಪುಣೆ ಹೆದ್ದಾರಿಯಲ್ಲಿ ಮ್ಯಾಜಿಕ್ ಪಾಯಿಂಟ್ ಹಿಲ್ ಸಮೀಪ ರಾತ್ರಿ 8ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬೈ ಸಬ್–ಅರ್ಬನ್ ಪ್ರದೇಶದ ಚೆಂಬೂರಿನ ಕೋಚಿಂಗ್ ಕ್ಲಾಸ್‌ವೊಂದರ ಸುಮಾರು 49 ವಿದ್ಯಾರ್ಥಿಗಳು ಖಾಸಗಿ ಬಸ್‌ನಲ್ಲಿ ಪಿಕ್‌ನಿಕ್‌ಗೆ ತೆರಳಿದ್ದರು. ವಿದ್ಯಾರ್ಥಿಗಳೆಲ್ಲರೂ 10ನೇ ತರಗತಿಯವರು ಎಂದು ತಿಳಿದು ಬಂದಿದೆ.
'ಲೋನವಾಲದಲ್ಲಿ ಪಿಕ್ನಿಕ್ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ, ಬ್ರೇಕ್ ವೈಫಲ್ಯದಿಂದಾಗಿ ಖೊಪೊಲಿ ಬಳಿಯ ಘಾಟಿಯಲ್ಲಿ (ಗುಡ್ಡಗಾಡು ರಸ್ತೆ) ಬಸ್ ಚಾಲಕನು ವಾಹನದ ಮೇಲೆ ತನ್ನ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ" ಎಂದು ಅಧಿಕಾರಿ ಹೇಳಿದರು.
ಅಪಘಾತದಲ್ಲಿ ಎಲ್ಲಾ ವಿದ್ಯಾರ್ಥಿಗಳು ಮತ್ತು ಚಾಲಕನಿಗೆ ಗಾಯಗಳಾಗಿವೆ, ಅವರನ್ನು ಲೋನವಾಲ ಮತ್ತು ಖೊಪೊಲಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ 17 ಮತ್ತು 16 ವರ್ಷದ ಇಬ್ಬರು ವಿದ್ಯಾರ್ಥಿಗಳು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


