ಆಂಧ್ರ ಪ್ರದೇಶ: ಮಾಂಡೌಸ್ ಚಂಡಮಾರುತ ಪೀಡಿತ ಕುಟುಂಬಗಳಿಗೆ ₹ 2 ಸಾವಿರ ಆರ್ಥಿಕ ನೆರವು
ಮಾಂಡೌಸ್ ಚಂಡಮಾರುತದಿಂದ ಹಾನಿಗೊಳಗಾದ ಕುಟುಂಬಗಳಿಗೆ ಆಂಧ್ರಪ್ರದೇಶ ಸರ್ಕಾರ ತಲಾ 2,000 ರೂಪಾಯಿಗಳವರೆಗೆ ಆರ್ಥಿಕ ನೆರವು ಬಿಡುಗಡೆ ಮಾಡಿದೆ. ಕುಟುಂಬಗಳು ಪುನರ್ವಸತಿ ಕೇಂದ್ರದಿಂದ ತಮ್ಮ ಮನೆಗೆ ಮರಳುವಾಗ ಈ ಹಣವನ್ನು ಪಾವತಿಸಲಾಗುವುದು ಎನ್ನಲಾಗಿದೆ.

ವಿಜಯವಾಡ: ಮಾಂಡೌಸ್ ಚಂಡಮಾರುತದಿಂದ ಹಾನಿಗೊಳಗಾದ ಕುಟುಂಬಗಳಿಗೆ ಆಂಧ್ರಪ್ರದೇಶ ಸರ್ಕಾರ ತಲಾ 2,000 ರೂಪಾಯಿಗಳವರೆಗೆ ಆರ್ಥಿಕ ನೆರವು ಬಿಡುಗಡೆ ಮಾಡಿದೆ. ಕುಟುಂಬಗಳು ಪುನರ್ವಸತಿ ಕೇಂದ್ರದಿಂದ ತಮ್ಮ ಮನೆಗೆ ಮರಳುವಾಗ ಈ ಹಣವನ್ನು ಪಾವತಿಸಲಾಗುವುದು ಎನ್ನಲಾಗಿದೆ.
ಚಂಡಮಾರುತ ಪೀಡಿತ ಜಿಲ್ಲೆಗಳಲ್ಲಿ ಪುನರ್ವಸತಿ ಕೇಂದ್ರಗಳ ಆರಂಭದ ಹೊರತಾಗಿಯೂ, ನಿರಾಶ್ರಿತರಿಗೆ ಅಗತ್ಯವಿರುವ ಯಾವುದೇ ಸಹಾಯವನ್ನು ಮಾಡುವಂತೆ ಮುಖ್ಯಮಂತ್ರಿ ಜಗನ್ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆರ್ಥಿಕ ನೆರವು ಬಿಡುಗಡೆ ಕುರಿತು ಭಾನುವಾರ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ.
ನೆಲ್ಲೂರು, ತಿರುಪತಿ,ಚಿತ್ತೂರು, ಅನ್ನಮಯ್ಯ ಮತ್ತು ವೈಎಸ್‌ಆರ್ ಕಡಪ ಜಿಲ್ಲೆಗಳ ಸಂತ್ರಸ್ತರಿಗೆ ಆರ್ಥಿಕ ನೆರವಿನ ಹಣವನ್ನು ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಮುಖ್ಯ ಕಾರ್ಯದರ್ಶಿ ಜವಾಹರ್ ರೆಡ್ಡಿ ನೇತೃತ್ವದ ಅಧಿಕಾರಿಗಳು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ರಕ್ಷಣಾ ಮತ್ತು ಪುನರ್ವಸತಿ ಸೇವೆಗಳಲ್ಲಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


