ದೇಶ

ಪ್ರಧಾನಿ ಮೋದಿ, ಹೆಚ್.ಡಿ. ದೇವೇಗೌಡ ಭೇಟಿ: ಅಂತರ್ ರಾಜ್ಯ ನದಿ ನೀರು ಹಂಚಿಕೆ ಸೇರಿ ಹಲವು ವಿಚಾರಗಳ ಚರ್ಚೆ

ಅಂತರ್ ರಾಜ್ಯ ನದಿ ನೀರಿನ ಹಂಚಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಪ್ರಧಾನಿ ಮೋದಿ, ಹೆಚ್.ಡಿ. ದೇವೇಗೌಡ ಭೇಟಿ: ಅಂತರ್ ರಾಜ್ಯ ನದಿ ನೀರು ಹಂಚಿಕೆ ಸೇರಿ ಹಲವು ವಿಚಾರಗಳ ಚರ್ಚೆ
ಹೆಚ್. ಡಿ. ದೇವೇಗೌಡ
Published On :

ನವದೆಹಲಿ:  ಅಂತರ್ ರಾಜ್ಯ ನದಿ ನೀರಿನ ಹಂಚಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

<strong>ಪ್ರಧಾನಿ ಮೋದಿ, ಹೆಚ್.ಡಿ. ದೇವೇಗೌಡ</strong>
ಪ್ರಧಾನಿ ಮೋದಿ, ಹೆಚ್.ಡಿ. ದೇವೇಗೌಡ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ, ಕಾವೇರಿ, ಕೃಷ್ಣ, ಮಹದಾಯಿ ಅಂತರ್ ರಾಜ್ಯ ನದಿ ನೀರಿನ ಹಂಚಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಮಾತುಕತೆ ನಡೆಸಲಾಗಿದೆ ಎಂದರು.

ಹಾಸನ ವಿಮಾನ ನಿಲ್ದಾಣ ಯೋಜನೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಕುಂಚಿಟಿಗ ಒಕ್ಕಲಿಗ ಸಮುದಾಯವನ್ನು ಒಬಿಸಿ ಪಟ್ಟಿಯಲ್ಲಿ ಸೇರಿಸುವಂತೆಯೂ ಪ್ರಧಾನಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. 

ತಾವು ಪ್ರಸ್ತಾಪಿಸಿರುವ ಎಲ್ಲಾ ವಿಷಯಗಳನ್ನು ಪ್ರಧಾನಿ ಗಂಭೀರವಾಗಿ ಪರಿಗಣಿಸಿದ್ದಾರೆ. ಎಲ್ಲಾ ದಾಖಲೆಗಳನ್ನು ಅವರು ಪರಿಶೀಲಿಸಿದ್ದು, ಖಂಡಿತವಾಗಿಯೂ ಪರಿಗಣಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ದೇವೇಗೌಡ ಮಾಹಿತಿ ನೀಡಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.