ತಮಿಳುನಾಡು: ನಾಲ್ಕು ಮಕ್ಕಳು, ಪತ್ನಿಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ತಿರುವಣ್ಣಾಮಲೈ ಜಿಲ್ಲೆಯ ಚೆಂಗಂ ತಾಲೂಕಿನಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯಲ್ಲಿ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ನಾಲ್ವರು ಮಕ್ಕಳನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ತಿರುವಣ್ಣಾಮಲೈ: ಜಿಲ್ಲೆಯ ಚೆಂಗಂ ತಾಲೂಕಿನಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯಲ್ಲಿ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ನಾಲ್ವರು ಮಕ್ಕಳನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸುಮಾರು 9 ವರ್ಷದ ಮತ್ತೊಬ್ಬ ಮಗಳು ಕತ್ತರಿಸಿದ ಗಾಯಗಳೊಂದಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾಳೆ.
ವ್ಯಕ್ತಿಯನ್ನು ಜಿಲ್ಲೆಯ ಚೆಂಗಂ ಬಳಿಯ ಒಂರಂತವಾಡಿ ಗ್ರಾಮದ ರೈತ ಕಾರ್ಮಿಕ ಪಳನಿಸಾಮಿ (45) ಎಂದು ಗುರುತಿಸಲಾಗಿದೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅನುಮಾನಗೊಂಡ ನೆರೆಹೊರೆಯವರು ಇಂದು ಮಾಹಿತಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಳನಿಸ್ವಾಮಿ ಛಾವಣಿಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದ್ದು, ಅವರ 37 ವರ್ಷದ ಪತ್ನಿ, 3 ಪುತ್ರಿಯರು ಮತ್ತು ಒಬ್ಬ ಪುತ್ರ ಶವವಾಗಿ ಪತ್ತೆಯಾಗಿದ್ದಾರೆ. ಸುಮಾರು 9 ವರ್ಷ ವಯಸ್ಸಿನ ಇನ್ನೊಂದು ಹೆಣ್ಣು ಮಗುವನ್ನು ಜಿಎಚ್‌ಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


