ಬಿಹಾರ: ನಕಲಿ ಮದ್ಯ ಸೇವಿಸಿ 5 ಮಂದಿ ಸಾವು, ಹಲವರು ಅಸ್ವಸ್ಥ
ನಕಲಿ ಮದ್ಯ ಸೇವಿಸಿ 5 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಸರನ್ ಜಿಲ್ಲೆಯ ಛಪ್ರಾ ಪ್ರದೇಶದಲ್ಲಿ ಬುಧವಾರ ನಡೆದಿದೆ.

ಸರನ್ (ಬಿಹಾರ): ನಕಲಿ ಮದ್ಯ ಸೇವಿಸಿ 5 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಸರನ್ ಜಿಲ್ಲೆಯ ಛಪ್ರಾ ಪ್ರದೇಶದಲ್ಲಿ ಬುಧವಾರ ನಡೆದಿದೆ.
ಸಾವಿಗೆ ನಕಲಿ ಮದ್ಯವೇ ಕಾರಣ ಎಂದು ಮೃತರ ಸಂಬಂಧಿಕರು ಹೇಳಿದ್ದರೂ ಪೊಲೀಸರು ಈ ಬಗ್ಗೆ ಖಚಿತ ಮಾಹಿತಿ ನೀಡಿಲ್ಲ. ಆದರೆ, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೆಲವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುರಿತು ಮಾಹಿತಿಗಳು ಬಂದಿದೆ ಎಂದು ಎಸ್'ಪಿ ಎಸ್.ಕುಮಾರ್ ಅವರು ಹೇಳಿದ್ದಾರೆ.
ಈ ನಡುವೆ ಘಟನಾ ಸ್ಥಳಕ್ಕೆ ಮಾಧೇಪುರ ಡಿಎಸ್ಪಿ ಆಗಮಿಸಿದ್ದು, ತನಿಖೆ ಆರಂಭಿಸಿದ್ದಾರೆ. ಏಪ್ರಿಲ್ 2016 ರಿಂದ ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಮದ್ಯ ಸೇವಿಸಿದ್ದರು ವಿಚಾರಣೆಯಿಂದ ದೂರ ಉಳಿಯಲು ತಲೆಮರೆಸಿಕೊಂಡಿರುವವರ ಕುರಿತು ಹುಡುಕಾಟ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಆಗಸ್ಟ್ ತಿಂಗಳಿನಲ್ಲಿಯೂ ಇದೇ ಜಿಲ್ಲೆಯ ಭೂಲ್‌ಪುರ ಗ್ರಾಮದಲ್ಲಿ ಇದೇ ರೀತಿಯ ಪ್ರಕರಣದಲ್ಲಿ ನಕಲಿ ಮದ್ಯ ಸೇವಿಸಿ ಐವರು ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


