9 ರಾಜ್ಯಗಳು ಸಿಬಿಐಗೆ ಮುಕ್ತ ಸಮ್ಮತಿ ಹಿಂಪಡೆದಿವೆ: ಕೇಂದ್ರ ಸರ್ಕಾರ
ತೆಲಂಗಾಣ ಮತ್ತು ಮೇಘಾಲಯ ಸೇರಿದಂತೆ ಒಂಬತ್ತು ರಾಜ್ಯಗಳು ತಮ್ಮ ರಾಜ್ಯದ ಪ್ರಕರಣಗಳ ತನಿಖೆಗೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ನೀಡಿದ್ದ ಮುಕ್ತ ಸಮ್ಮತಿಯನ್ನು ಹಿಂಪಡೆದಿವೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಬುಧವಾರ ಹೇಳಿದ್ದಾರೆ.

ನವದೆಹಲಿ: ತೆಲಂಗಾಣ ಮತ್ತು ಮೇಘಾಲಯ ಸೇರಿದಂತೆ ಒಂಬತ್ತು ರಾಜ್ಯಗಳು ತಮ್ಮ ರಾಜ್ಯದ ಪ್ರಕರಣಗಳ ತನಿಖೆಗೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ನೀಡಿದ್ದ ಮುಕ್ತ ಸಮ್ಮತಿಯನ್ನು ಹಿಂಪಡೆದಿವೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಬುಧವಾರ ಹೇಳಿದ್ದಾರೆ.
ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ(ಡಿಎಸ್‌ಪಿಇ) ಕಾಯಿದೆ, 1946ರ ಸೆಕ್ಷನ್ 6ರ ಪ್ರಕಾರ, ಸಿಬಿಐ, ಇತರ ರಾಜ್ಯಗಳ ಅಧಿಕಾರ ವ್ಯಾಪ್ತಿಯಲ್ಲಿ ತನಿಖೆ ನಡೆಸಲು ಆಯಾ ರಾಜ್ಯ ಸರ್ಕಾರಗಳಿಂದ ಒಪ್ಪಿಗೆ ಪಡೆಯಬೇಕು ಎಂದು ಅವರು ಲೋಕಸಭೆಯಲ್ಲಿ ಲಿಖಿತ ಪ್ರಶ್ನೆಗೆ ಉತ್ತರಿಸಿದರು.
DSPE ಕಾಯಿದೆ, 1946 ರ ಸೆಕ್ಷನ್ 6 ರ ನಿಬಂಧನೆಗಳ ಪ್ರಕಾರ, ನಿರ್ದಿಷ್ಟ ವರ್ಗದ ವ್ಯಕ್ತಿಗಳ ವಿರುದ್ಧದ ನಿರ್ದಿಷ್ಟ ವರ್ಗದ ಅಪರಾಧಗಳ ತನಿಖೆಗಾಗಿ ರಾಜ್ಯ ಸರ್ಕಾರಗಳು ಸಿಬಿಐಗೆ ಮುಕ್ತ ಸಮ್ಮತಿಯನ್ನು ನೀಡಿವೆ. ಆ ಮೂಲಕ ನಿರ್ದಿಷ್ಟ ಪ್ರಕರಣಗಳನ್ನು ದಾಖಲಿಸಲು ಮತ್ತು ತನಿಖೆ ಮಾಡಲು ಏಜೆನ್ಸಿಗೆ ಅನುವು ಮಾಡಿಕೊಡುತ್ತದೆ ಎಂದು ಸಿಬ್ಬಂದಿ ಖಾತೆ ರಾಜ್ಯ ಸಚಿವ ಸಿಂಗ್ ಹೇಳಿದ್ದಾರೆ.
ಛತ್ತೀಸ್‌ಗಢ, ಜಾರ್ಖಂಡ್, ಕೇರಳ, ಮೇಘಾಲಯ, ಮಿಜೋರಾಂ, ಪಂಜಾಬ್, ರಾಜಸ್ಥಾನ, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಸರ್ಕಾರ ತಮ್ಮ ರಾಜ್ಯದಲ್ಲಿನ ಪ್ರಕರಣಗಳ ತನಿಖೆಗೆ ಸಿಬಿಐಗೆ ನೀಡಿದ್ದ ಮುಕ್ತ ಸಮ್ಮತಿಯನ್ನು ಹಿಂಪಡೆದಿವೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


