ದೆಹಲಿ: ಅಪ್ರಾಪ್ತ ಬಾಲಕಿಯ ಮೇಲೆ ಆಸಿಡ್ ದಾಳಿ, ಓರ್ವನ ಬಂಧನ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮೋಟಾರ್ ಬೈಕ್ ನಲ್ಲಿ ಬಂದ ಅಪರಿಚಿತರು 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಆ್ಯಸಿಡ್ ದಾಳಿ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ನವದೆಹಲಿ: ಮೋಟಾರ್ ಬೈಕ್ ನಲ್ಲಿ ಬಂದ ಅಪರಿಚಿತರು 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಆ್ಯಸಿಡ್ ದಾಳಿ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಶಾಲಾ ಬಾಲಕಿಯ ಮೇಲೆ ದುಷ್ಕರ್ಮಿ ಆ್ಯಸಿಡ್ ಎರಚಿದ ಘಟನೆ ನಡೆದಿದೆ. ಬಾಲಕಿಯು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಇಬ್ಬರು ಕಿರಾತಕರು ಬೈಕ್‍ನಲ್ಲಿ ಬಂದಿದ್ದಾರೆ. ಈ ವೇಳೆ ಹಿಂದೆ ಕುಳಿತಿದ್ದ ಕಿರಾತಕ ಬಾಲಕಿಯ ಮುಖದ ಮೇಳೆ ಆ್ಯಸಿಡ್ ಎರಚಿದ್ದಾನೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದ್ದು, ತೀವ್ರ ಗಾಯಗೊಂಡ ಆ್ಯಸಿಡ್ ಸಂತ್ರಸ್ತೆಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಮತ್ತು ಡಿಸಿಪಿ ದ್ವಾರಕಾ ಆಸ್ಪತ್ರೆಗೆ ಹೋಗಿದ್ದು, ಬಾಲಕಿಯ ಕುಟುಂಬಸ್ಥರೊಂದಿಗೆ ಮಾತನಾಡಿದ್ದಾರೆ. ಪ್ರಾಥಮಿಕ ವರದಿ ಪ್ರಕಾರ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ.
ಘಟನೆಯ ವೇಳೆ ಸಂತ್ರಸ್ತ ಬಾಲಕಿ ತನ್ನ ತಂಗಿಯೊಂದಿಗೆ ಇದ್ದಳು ಎಂದು ಅಧಿಕಾರಿಗಳು ಹೇಳಿದ್ದಾರೆ. "ತಮಗೆ ತಿಳಿದಿರುವ ಇಬ್ಬರು ವ್ಯಕ್ತಿಗಳ ಮೇಲೆ ಅವಳು ಅನುಮಾನ ವ್ಯಕ್ತಪಡಿಸಿದ್ದಾಳೆ. ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


