ದೇಶ

ಪವಾರ್‌ಗೆ ಜೀವ ಬೆದರಿಕೆ: ತನ್ನ ಪತ್ನಿ ಎನ್‌ಸಿಪಿ ಕಾರ್ಯಕರ್ತನೊಂದಿಗೆ ಓಡಿಹೋಗಿದ್ದಾಳೆ ಎಂದ ಆರೋಪಿ!

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್‌ ಅವರಿಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ವ್ಯಕ್ತಿಯನ್ನು ಮುಂಬೈ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ತನ್ನ ಪತ್ನಿ ಎನ್‌ಸಿಪಿ...

ಪವಾರ್‌ಗೆ ಜೀವ ಬೆದರಿಕೆ: ತನ್ನ ಪತ್ನಿ ಎನ್‌ಸಿಪಿ ಕಾರ್ಯಕರ್ತನೊಂದಿಗೆ ಓಡಿಹೋಗಿದ್ದಾಳೆ ಎಂದ ಆರೋಪಿ!
ಶರದ್ ಪವಾರ್
Published On :

ಮುಂಬೈ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್‌ ಅವರಿಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ವ್ಯಕ್ತಿಯನ್ನು ಮುಂಬೈ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ತನ್ನ ಪತ್ನಿ ಎನ್‌ಸಿಪಿ ಕಾರ್ಯಕರ್ತನೊಂದಿಗೆ ಓಡಿಹೋದ ನಂತರ ಮತ್ತು ಪಕ್ಷದ ಮುಖ್ಯಸ್ಥರು ಈ ವಿಷಯದಲ್ಲಿ ಮಧ್ಯಪ್ರವೇಶಿಸದ ಕಾರಣ ಆಕ್ರೋಶಗೊಂಡು ಅವರಿಗೆ ಬೆದರಿಕೆ ಹಾಕಿದ್ದೇನೆ ಎಂದು ಹೇಳಿರುವುದಾಗಿ ಪೊಲೀಸ್ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

46 ವರ್ಷದ ಆರೋಪಿ ಬಿಹಾರಕ್ಕೆ ಸ್ಥಳಾಂತರಗೊಳ್ಳುವ ಮೊದಲು 10 ವರ್ಷಗಳ ಕಾಲ ತನ್ನ ಪತ್ನಿಯೊಂದಿಗೆ ಪುಣೆಯಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪವಾರ್‌ ಅವರ ಲ್ಯಾಂಡ್‌ಲೈನ್ ಫೋನ್‌ಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಕ್ಕಾಗಿ ಮುಂಬೈ ಪೊಲೀಸರು ಆರೋಪಿಯನ್ನು ಪಾಟ್ನಾದಿಂದ ಬುಧವಾರ ಬಂಧಿಸಿದ್ದಾರೆ.

"ಪ್ರಕರಣದಲ್ಲಿ ಆತನ ವಿಚಾರಣೆಯ ನಂತರ, ಆರೋಪಿಯನ್ನು ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕೋರ್ಟ್ ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ" ಎಂದು ಅವರು ಹೇಳಿದ್ದಾರೆ.

"ವಿಚಾರಣೆಯ ಸಮಯದಲ್ಲಿ, ಆರೋಪಿ ಬಿಹಾರಕ್ಕೆ ಸ್ಥಳಾಂತರಗೊಳ್ಳುವ ಮೊದಲು ತನ್ನ ಹೆಂಡತಿಯೊಂದಿಗೆ 10 ವರ್ಷಗಳ ಕಾಲ ಪುಣೆಯಲ್ಲಿ ವಾಸಿಸುತ್ತಿದ್ದ. ಈ ವೇಳೆ ತನ್ನ ಪತ್ನಿ ಎನ್ ಸಿಪಿ ಕಾರ್ಯಕರ್ತನೊಂದಿಗೆ ಓಡಿಹೋಗಿ ಮದುವೆಯಾದಳು ಎಂದು ಆರೋಪಿ ಹೇಳಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.