ಕೊಚ್ಚಿ: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು
ಇಬ್ಬರು ಯುವಕರು ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡ ದಾರುಣ ಘಟನೆ ಶುಕ್ರವಾರ ಕೊರಟ್ಟಿ ರೈಲು ನಿಲ್ದಾಣದಲ್ಲಿ ನಡೆದಿದೆ.

ಕೊಚ್ಚಿ: ಇಬ್ಬರು ಯುವಕರು ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡ ದಾರುಣ ಘಟನೆ ಶುಕ್ರವಾರ ಕೊರಟ್ಟಿ ರೈಲು ನಿಲ್ದಾಣದಲ್ಲಿ ನಡೆದಿದೆ.
ಮೃತಪಟ್ಟ ಯುವಕರನ್ನು ಕೊರಟ್ಟಿ ನಿವಾಸಿಗಳಾದ ಕೃಷ್ಣಕುಮಾರ್(17) ಮತ್ತು ಸಂಜಯ್ (16) ಎಂದು ಗುರುತಿಸಲಾಗಿದೆ.
ಕೊರಟ್ಟಿಯಲ್ಲಿ ಹೆಚ್ಚಿನ ರೈಲುಗಳು ನಿಲುಗಡೆಯಾಗದ ಕಾರಣ, ಇಂದು ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ನಡೆದ ಈ ಘಟನೆ ತಕ್ಷಣ ಗಮನಕ್ಕೆ ಬಂದಿಲ್ಲ. ಬೆಳಗ್ಗೆ 5 ಗಂಟೆಯ ಸುಮಾರಿಗೆ ಯುವಕರ ಶವಗಳು ಪತ್ತೆಯಾದ ನಂತರ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯ ರೈಲು ನಿಲ್ದಾಣವಾಗಿರುವುದರಿಂದ, ಕೊರಟ್ಟಿಯಲ್ಲಿ ಹೆಚ್ಚಿನ ರೈಲುಗಳು ನಿಲ್ಲುವುದಿಲ್ಲ. ಆದರೆ ಕೆಲವೊಮ್ಮೆ, ರೈಲುಗಳು ನಿಧಾನವಾಗಿ ಚಲಿಸುತ್ತವೆ ಮತ್ತು ಕೆಲವು ಬಾರಿ ನಿಲ್ಲಿಸುತ್ತವೆ.
ಈ ಯುವಕರು ಚಲಿಸುತ್ತಿದ್ದ ರೈಲಿನಿಂದ ಕೊರಟ್ಟಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಜಿಗಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಯುವಕರಲ್ಲಿ ಒಬ್ಬರ ತಲೆಗೆ ತೀವ್ರ ಪೆಟ್ಟಾಗಿದ್ದು, ಮತ್ತೊಬ್ಬರು ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿಕೊಂಡಿದ್ದಾರೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


